ಚಿತ್ರದುರ್ಗ : ಜಿಲ್ಲಾಕೇಂದ್ರದಲ್ಲಿನವೆಂಬರ್ 27ರಂದು ಕನಕ ಜಯಂತಿ ಆಚರಿಸುವ ಸಂಬಂಧ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲು ನವೆಂಬರ್ 18ರ ಬೆಳಗ್ಗೆ 11ಕ್ಕೆ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಎಸ್ .ರಮ್ಯಾ ಸಭೆಯ ಅಧ್ಯಕ್ಷತೆ ವಹಿಸುವರು. ಪೂರ್ವಭಾವಿ ಸಭೆಗೆ ಸಮಾಜದ ಮುಖಂಡರು ಹಾಗೂ ಅಧಿಕಾರಿಗಳು ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.**
ತರಬೇತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ರವರ ಪಿಎಂ-ಜನ್ ಮನ್ ಹಾಗೂ ಡಿಎ-ಜೆಜಿಜೆಯುಎ ಯೋಜನೆಯಡಿ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡ ಹಾಗೂ ನೈಜ ದುರ್ಬಲ ಬುಡಕಟ್ಟು ಸಮುದಾಯದ ಯುವಕರಿಗೆ ಸೋಲಾರ್ ಪಿವಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ 5ನೇ ತರಗತಿ ಉತ್ತೀರ್ಣರಾಗಿರಬೇಕು, ಓದಲು ಮತ್ತು ಬರೆಯಲು ತಿಳಿದಿರಬೇಕು ಹಾಗೂ ತರಬೇತಿಯಲ್ಲಿಭಾಗವಹಿಸಲು ಮತ್ತು ಅಗತ್ಯ ತಾಂತ್ರಿಕ ಕೌಶಲ್ಯಗಳನ್ನು ಕಲಿಯಲು ಆಸಕ್ತಿ ಹೊಂದಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಮೂನೆಯಲ್ಲಿಮಾಹಿತಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ(ಜೆ.ಸಿ.ಆರ್ . ಬಡಾವಣೆ, 4ನೇ ಕ್ರಾಸ್ (ಪೂರ್ವ), ಗಣೇಶ ದೇವಸ್ಥಾನದ ಹತ್ತಿರ, ಚಿತ್ರದುರ್ಗ)ಅಥವಾ ಆಯಾ ತಾಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆುಂದ ಅರ್ಜಿಗಳನ್ನು ಪಡೆದು ಸಲ್ಲಿಸಬಹುದು ಎಂದು ಜಿಲ್ಲಾಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.