ಮುಂಗಡ ಹಣ ಪಾವತಿಗೆ ದಿನಾಂಕ ವಿಸ್ತರಣೆ

Contributed by: shantha.a@timesofindia.com|Vijaya Karnataka•
Vijay Karnataka
* ಪಿಜಿ ವೈದ್ಯಕೀಯ

ವಿಕ ಸುದ್ದಿಲೋಕ ಬೆಂಗಳೂರು
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿಭಾಗವಹಿಸಲು ಇಚ್ಛಿಸುವವರಿಗೆ ಮುಂಗಡ ಹಣ ಪಾವತಿಸಲು ನ.21ರವರೆಗೂ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ . ಪ್ರಸನ್ನ ತಿಳಿಸಿದ್ದಾರೆ.

ನ.23ರಂದು ಬೆಳಗ್ಗೆ 11 ಗಂಟೆವರೆಗೆ ಆಪ್ಷನ್ ದಾಖಲಿಸಲು ಅವಕಾಶ ನೀಡಲಾಗಿದೆ. ಸೀಟು ಹಂಚಿಕೆ ಫಲಿತಾಂಶ ಸೇರಿದಂತೆ ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿನ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪ್ರವೇಶಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ. ನ.22ರಂದು ಬೆಳಗಿನ ಅವಧಿಯಲ್ಲಿಎಲ್ಲಾವಿಷಯಗಳ ಅಭ್ಯರ್ಥಿಗಳಿಗೆ ಸಾಮಾನ್ಯಜ್ಞಾನ ಪತ್ರಿಕೆಯ ಪರೀಕ್ಷೆ ಇರುತ್ತದೆ. ಮಧ್ಯಾಹ್ನದ ಅವಧಿಯಲ್ಲಿಕನ್ನಡ ಮತ್ತು ವಿಜ್ಞಾನ ವಿಷಯಗಳ ನಿರ್ದಿಷ್ಟ ಪತ್ರಿಕೆ-2ಕ್ಕೆ ಮಾತ್ರ ಪರೀಕ್ಷೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.