‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ವತಿಯಿಂದ ಮಂಗಳೂರು ವಿಶ್ವವಿದ್ಯಾಲಯ ಡಾ.ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಸಹಯೋಗದಲ್ಲಿಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸಲ್ಪಡುವ ಹದಿನಾಲ್ಕನೇ ವರ್ಷದ ನುಡಿಹಬ್ಬ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ- 2026’ ಚತುರ್ದಶ ಸರಣಿ ನ.22ರಿಂದ 28ರವರೆಗೆ ನಗರದ ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜು ರವೀಂದ್ರ ಕಲಾಭವನದಲ್ಲಿಜರಗಲಿದೆ ಎಂದು ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿಹೇಳಿದರು.ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ: ಸಪ್ತಾಹದ ಉದ್ಘಾಟನೆ ಸಮಾರಂಭ
ನ.22ರಂದು ಸಂಜೆ 4.30ಕ್ಕೆ ಜರುಗಲಿದ್ದು, ಗೌರವಾಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮಂಗಳೂರು ವಿವಿ ಕುಲಪತಿ ಡಾ.ಪಿ.ಎಲ್ .ಧರ್ಮ ಉದ್ಘಾಟಿಸುವರು. ಬಜ್ಪೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಎಲ್ .ಶೆಟ್ಟಿ ಥಾಣೆ ಅವರಿಗೆ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ ನೀಡಲಾಗುವುದು. ನಿವೃತ್ತ ಸೇನಾನಿ ಕ್ಯಾ.ಶರತ್ ಭಂಡಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ನ.28ರಂದು ಸಮಾರೋಪ ಸಮಾರಂಭದಲ್ಲಿಉದ್ಯಮಿ ಕೆ.ಕೆ.ಶೆಟ್ಟಿ ಅಹಮದ್ ನಗರ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್ ದೀಪ ಪ್ರಜ್ವಲನೆ ಮಾಡುವರು. ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಬಹುಭಾಷಾ ಪ್ರಸಂಗಕರ್ತ ಡಾ.ಡಿ.ಸದಾಶಿವ ಭಟ್ ಪಳ್ಳು ಅವರಿಗೆ 2026ನೇ ಸಾಲಿನ ‘ಯಕ್ಷಾಂಗಣ ಗೌರವ ಪ್ರಶಸ್ತಿ’ ಪ್ರದಾನ ಮಾಡಲಿದ್ದಾರೆ ಎಂದರು.
ಸಂಸ್ಮರಣೆ - ಸನ್ಮಾನ
ಸಪ್ತಾಹದ ಎಲ್ಲದಿನಗಳಲ್ಲಿಯಕ್ಷಗಾನಕ್ಕಾಗಿ ದುಡಿದ ಹಿರಿಯರಾದ ಕೀರ್ತಿಶೇಷ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ, ಪಳ್ಳಿ ರಮಾನಾಥ ಹೆಗ್ಡೆ, ವಿದ್ವಾನ್ ಕೆ.ಕಾಂತ ರೈ ಮೂಡಬಿದಿರೆ, ಎ.ಕೆ. ನಾರಾಯಣ ಶೆಟ್ಟಿ ಮತ್ತು ಎ.ಕೆ.ಮಹಾಬಲ ಶೆಟ್ಟಿ ಫರಂಗಿಪೇಟೆ, ಕೆ.ಗೋವಿಂದ ಭಟ್ ಸೂರಿಕುಮೇರು ಹಾಗೂ ಶಂಭು ಶರ್ಮ ವಿಟ್ಲಅವರ ಸಂಸ್ಮರಣೆ ನಡೆಯಲಿದೆ. ಹಿರಿಯ ಯಕ್ಷಗಾನ ಕಲಾವಿದ ಡಾ.ತಾರಾನಾಥ ವರ್ಕಾಡಿ ಅವರಿಗೆ ಹಾಸ್ಯಪಟು ದಿ.ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸ್ಮತಿ ಗೌರವ ನೀಡಲಾಗುವುದು ಎಂದರು.
ಯಕ್ಷಾಂಗಣ ಉಪಾಧ್ಯಕ್ಷ ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ಪ್ರಧಾನ ಸಂಚಾಲಕ ರವೀಂದ್ರ ರೈ ಕಲ್ಲಿಮಾರು, ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ , ಕಾರ್ಯದರ್ಶಿಗಳಾದ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಸುಮಾ ಪ್ರಸಾದ್ , ವರದರಾಜ ಬೇಕಲ್ ಉಪಸ್ಥಿತರಿದ್ದರು.