ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಶಾಲಾ ಮಕ್ಕಳಲ್ಲಿಸೃಜನಶೀಲತೆ, ಏಕಾಗ್ರತೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಇದರಿಂದ ಓದು ಮತ್ತು ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಕೆಲಸ ಒಟ್ಟೊಟ್ಟಿಗೆ ಸಾಗುತ್ತದೆ ಎಂದು ತಾಪಂ ಇಒ ಆರ್ . ಹೇಮಾವತಿ ತಿಳಿಸಿದರು.ತಾಲೂಕಿನ ಕುಂಬಿಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಕಾಳನಾಯಕನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.
ಪಠ್ಯದ ಜತೆಗೆ ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮಕ್ಕಳು ಸಕ್ರಿಯವಾಗಿ ಭಾಗವಹಿಸಬೇಕು. ಇಂತಹ ಸ್ಪರ್ಧೆಗಳು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಸಹಕಾರಿಯಾಗಿವೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶ್ರದ್ಧೆಯಿಂದ ಅಧ್ಯಯನ ಮಾಡಬೇಕು ಎಂದು ಹೇಳಿದರು.
5ರಿಂದ 7ನೇ ತರಗತಿ ಹಾಗೂ 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಿತು. ತಾಲೂಕಿನ ವಿವಿಧ ಶಾಲೆಗಳಿಂದ ನೂರಾರು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿತಮ್ಮ ಕಲಾ ಪ್ರತಿಭೆ ಪ್ರದರ್ಶಿಸಿದರು.
ಪರಿಸರ, ಸಂಸ್ಕೃತಿ, ಸ್ವಚ್ಛತೆ, ರಾಷ್ಟ್ರೀಯ ಭಾವೈಕ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುಂದರ ಚಿತ್ರಗಳನ್ನು ಬಿಡಿಸಿ ಎಲ್ಲರ ಗಮನ ಸೆಳೆದರು. ಬಣ್ಣಗಳ ಮೂಲಕ ತಮ್ಮ ಕಲ್ಪನಾ ಶಕ್ತಿಯನ್ನು ಕಾಗದದ ಮೇಲೆ ಮೂಡಿಸಿದ ಮಕ್ಕಳ ಸೃಜನಶೀಲತೆಗೆ ಶಿಕ್ಷಕರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ಪರ್ಧೆಯಲ್ಲಿವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕುಂಬಿಗಾನಹಳ್ಳಿ ಗ್ರಾಪಂ ಪಿಡಿಒ ಪ್ರಶಾಂತ್ ಕುಮಾರ್ , ತಾಪಂ ಸಹಾಯಕ ನಿರ್ದೇಶಕ ಚಂದ್ರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಪ್ರಸನ್ನಕುಮಾರ್ , ಸಿಆರ್ ಪಿ ಅಶೋಕ್ ಕುಮಾರ್ , ಮೇಲೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್ .ಎಂ. ಭಾಸ್ಕರ್ , ಕಾಳನಾಯಕನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ , ಗ್ರಾಪಂ ಕಾರ್ಯದರ್ಶಿ ಜಿ.ಎಂ. ಜನಾರ್ದನ ಇನ್ನಿತರರು ಭಾಗವಹಿಸಿದ್ದರು.
19ಎಸ್ ಡಿಎಲ್ 2
ಶಿಡ್ಲಘಟ್ಟ ತಾಲೂಕಿನ ಕಾಳನಾಯಕನಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.