ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾಎನ್ .ಜೆ.ವೈ ಮತ್ತು 11 ಕೆ.ವಿ ಮಾರ್ಗಗಳಲ್ಲಿನ.22ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೇಗುಂಟನೂರು, ಪಂಡರಹಳ್ಳಿ, ಎಚ್ .ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್ .ಕೋಟೆ, ಗೋಡಬನಾಳು, ತೇಕಲವಟ್ಟಿ, ಐಮಂಗಲ ಮತ್ತು ಸುತ್ತಲಿನ ಗ್ರಾಮಗಳಲ್ಲಿವಿದ್ಯುತ್ ಅಡಚರಣೆಯಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಇಇ ತಿಳಿಸಿದ್ದಾರೆ.
**
ಕುರಿ, ಮೇಕೆ ಸಾಕಣೆ ತರಬೇತಿ
ಚಿತ್ರದುರ್ಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿನ.24 ಮತ್ತು 25ರಂದು ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಣೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮೊ.9972965479, 9886002248, 9886803637ಗೆ ಸಂಪರ್ಕಿಸಬಹುದು. ತರಬೇತಿಯಲ್ಲಿಭಾಗವಹಿಸಲು ಇಚ್ಛಿಸುವ ರೈತರು ಮುಂಚಿತವಾಗಿ ವಾಟ್ಸಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.