ಬೈಕ್ ಟ್ಯಾಕ್ಸಿ ಸುಪ್ರೀಂ ತೀರ್ಪಿನ ಬಗ್ಗೆ ಸಾರಿಗೆ ಸಚಿವರ ಪ್ರತಿಕ್ರಿಯೆ ....

Contributed by: iranna.goudar@timesofindia.com|Vijaya Karnataka•
Vijay Karnataka
ಸುಪ್ರೀಂಕೋರ್ಟ್ ನಿರ್ದೇಶನದಂತೆ ಬೈಕ್ ಟ್ಯಾಕ್ಸಿ ವಿಚಾರದಲ್ಲಿಅನೇಕ ನಿಯಮ ಹೇರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ. ಈ ಸಂಬಂಧ ನಿಯಮ ರೂಪಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಯಾಣಿಕರ ಅದರಲ್ಲೂಮಹಿಳಾ ಪ್ರಯಾಣಿಕರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿಬೈಕ್ ಟ್ಯಾಕ್ಸಿ ಚಲಾಯಿಸುವವರ ದಾಖಲೆಗಳು, ಜಿಪಿಎಸ್ ಅಳವಡಿಕೆ, ವಾಹನಕ್ಕೆ ವಿಮೆ ಮತ್ತು ಇತರ ದಾಖಲೆ ಪರಿಶೀಲಿಸಲಾಗುತ್ತದೆ. ಇಂತಹ ಹಲವು ನಿಯಮ ರೂಪಿಸಿ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಈ ಕುರಿತು ಅಡ್ವೊಕೇಟ್ ಜನರಲ್ ಜತೆ ಇನ್ನೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

- ಬೈರತಿ ಸುರೇಶ್ , ಸಾರಿಗೆ ಸಚಿವ