ಲಾಟರಿ ಮೂಲಕವೇ ನಿವೇಶನ ಹಂಚಿಕೆ

Contributed by: venki_dhreporter@rediffmail.com|Vijaya Karnataka•
Vijay Karnataka
ಲಾಟರಿ ಮೂಲಕವೇ ನಿವೇಶನ ಹಂಚಿಕೆ

1,239 ಅರ್ಜಿದಾರರ ಸಮ್ಮುಖದಲ್ಲೇ ಆಯ್ಕೆ ಪ್ರಕ್ರಿಯೆ | ಶಾಸಕಿ ರೂಪಕಲಾ ಶಶಿಧರ್ ಹೇಳಿಕೆ
ವಿಕ ಸುದ್ದಿಲೋಕ ಕೆಜಿಎಫ್

ನಗರಸಭೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿವಾಸಿಸುತ್ತಿರುವ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆಯಲ್ಲಿಯಾವುದೇ ರೀತಿಯ ಗೊಂದಲ, ತಾರತಮ್ಯ ಹಾಗೂ ಲೋಪಗಳಿಗೆ ಅವಕಾಶ ನೀಡದೆ ಸಂಪೂರ್ಣ ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಲಾಟರಿ ಮೂಲಕವೇ ಫಲಾನುಭವಿಗಳ ಆಯ್ಕೆ ಮಾಡುವುದು ಖಚಿತ ಎಂದು ಶಾಸಕಿ ರೂಪಕಲಾ ಶಶಿಧರ್ ಸ್ವಷ್ಟಪಡಿಸಿದರು.

ನಗರದ ಹೈಗ್ರೌಂಡ್ ನಲ್ಲಿತಾಲೂಕು ಆಡಳಿತ ಮತ್ತು ನಗಸಭೆ ವತಿಯಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು, ನಗರಸಭೆಯ 35 ವಾರ್ಡ್ ಗಳಲ್ಲಿವಾಸಿಸುತ್ತಿರುವ ನಿವೇಶನ ರಹಿತ ಕುಟುಂಬಗಳು ನನ್ನ ಎರಡು ಕಣ್ಣುಗಳಿದ್ದಂತೆ. ಪ್ರತಿಯೊಂದು ಕುಟುಂಬಕ್ಕೂ ನ್ಯಾಯ ದೊರೆಯಬೇಕು ಎಂಬುದು ನನ್ನ ಆಶಯ. ಈ ಹಿನ್ನೆಲೆಯಲ್ಲಿಯಾರ ಪ್ರಭಾವಕ್ಕೂ ಮಣಿಯದೆ, ಅರ್ಹ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲು ಲಾಟರಿ ಪದ್ಧತಿಯನ್ನು ಅನುಸರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಆಂಡ್ರಸನ್ ಪೇಟೆಯ ರೋಜರ್ಸ್ ಕ್ಯಾಂಪ್ ಪ್ರದೇಶದಲ್ಲಿಸುಮಾರು 20 ಎಕರೆ ಜಾಗದಲ್ಲಿ750 ನಿವೇಶನಗಳನ್ನು ಅಭಿವೃದ್ಧಿಪಡಿಸಿ ವಿತರಿಸಲು ಯೋಜನೆ ರೂಪಿಸಲಾಗಿದೆ. ಈ ನಿವೇಶನಗಳನ್ನು ಪಡೆಯಲು 3,000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ, ಸಮರ್ಪಕ ದಾಖಲೆಗಳನ್ನು ಸಲ್ಲಿಸದ ಹಾಗೂ ನಿಗದಿತ ಅರ್ಹತೆಗಳನ್ನು ಹೊಂದಿರದ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ. ಅಂತಿಮವಾಗಿ 1,239 ಅರ್ಜಿಗಳು ಸ್ವೀಕೃತಗೊಂಡಿದ್ದು, ಅರ್ಹ ಅರ್ಜಿದಾರರ ಸಮ್ಮುಖದಲ್ಲಿಯೇ ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದರು.

ಮೊದಲ ಹಂತದಲ್ಲಿ750 ನಿವೇಶನಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಈ ಹಂತದಲ್ಲಿನಿವೇಶನ ದೊರೆಯದ ಅರ್ಹ ಕುಟುಂಬಗಳಿಗೆ ಎರಡನೇ ಹಂತದಲ್ಲಿನಿವೇಶನ ಪಡೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿಕ್ರಮ ಕೈಗೊಳ್ಳಲಾಗುವುದು. ನೂತನ ಬಡಾವಣೆಯನ್ನು ಆಧುನಿಕ ಸೌಲಭ್ಯಗಳು ಹಾಗೂ ವ್ಯವಸ್ಥಿತ ನಗರಾಭಿವೃದ್ಧಿ ಮಾದರಿಯನ್ನು ಅಳವಡಿಸಿಕೊಂಡು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಜನರ ಮನೆ ಬಾಗಿಲಿಗೆ ಆಡಳಿತ : ಸಾರ್ವಜನಿಕರಿಂದ ಪಿಂಚಣಿ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಸರಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬ ಉದ್ದೇಶದಿಂದ ಸಭೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಗಳಲ್ಲಿಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳಲ್ಲಿಬಹುತೇಕ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದಿರುವ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ನಗರದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತ ವ್ಯವಸ್ಥೆ ನಿರ್ಮಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿತಹಸೀಲ್ದಾರ್ ಗಾಯತ್ರಿ, ನಗರಸಭೆ ಪೌರಾಯುಕ್ತ ಶ್ರೀಧರ್ , ಸಿಡಿಪಿಒ ರಾಜೇಶ್ , ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜಶೇಖರ್ , ನಗರಸಭೆ ಮಾಜಿಅಧ್ಯಕ್ಷೆ ಇಂದಿರಾಗಾಂಧಿ ದಯಾ ಶಂಕರ್ , ವೇಣುಗೋಪಾಲ್ , ಮಗಿ ಶಶಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

21ಕೆಜಿಎಫ್ 1

ಪ್ರಜಾಸೇವೆಯ ಕಾರ ್ಯಕ್ರಮದಲ್ಲಿಶಾಸಕರು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಅಲಿಸಿದರು.