ಹೆಚ್ಚುವರಿ ಮತಗಟ್ಟೆಗೆ ಪ್ರಸ್ತಾವನೆ: ಅಪರ ಡಿಸಿವಿಕ ಸುದ್ದಿಲೋಕ ಧಾರವಾಡ
1,200ಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಮತಗಟ್ಟೆಗಳನ್ನು ವಿಭಜಿಸಿ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸುವ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ಕರೆಯಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ 10 ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಪ್ರಸ್ತಾವನೆಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ವಿಶೇಷ ಸಮಗ್ರ ಪರಿಷ್ಕರಣೆ ಅಡಿಯಲ್ಲಿಮತದಾರರ ಪಟ್ಟಿಗೆ ಸಂಬಂಧಿಸಿದ ವಿವಿಧ ಹಂತಗಳ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ವೇಳಾಪಟ್ಟಿಯ ಪ್ರಕಾರ, ನ.23ರೊಳಗೆ ಮತಗಟ್ಟೆಗಳ ತರ್ಕಬದ್ಧೀಕರಣ ಹಾಗೂ ಮರುಹೊಂದಾಣಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಡಿ.1ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಡಿಸೆಂಬರ್ 1ರಿಂದ ಡಿ.31ರ ವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಜ. 14ರೊಳಗೆ ವಿಲೇವಾರಿ ಮಾಡಲಾಗುತ್ತದೆ. ಅಂತಿಮವಾಗಿ, ಜನೆವರಿ 20ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಸಭೆಯಲ್ಲಿಪ್ರಕಾಶ ಹಳಿಯಾಳ, ದೇವರಾಜ ಕಂಬಳಿ, ಸಿದ್ದು ಕಲ್ಯಾಣಶೆಟ್ಟಿ, ಜಾವೀದ ಬೆಳಗಾಂವಕಾರ, ಹಕ್ಕಮಹಮ್ಮದ ಗೋಲಂದಾಜ್ ಸೇರಿದಂತೆ ಇತರರು ಇದ್ದರು.
ಫೋಟೊ: 20ಮಹೇಶ9
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮಾತನಾಡಿದರು.