ಎಸ್ ಡಿಎಂ ಆಯುರ್ವೇದ ಕಾಲೇಜಿನಲ್ಲಿ2026ನೇ ಸಾಲಿನ ಪದವಿ ಪ್ರದಾನ

Contributed by: kukkupalke@gmail.com|Vijaya Karnataka•
2026
ಆಯುರ್ವೇದದ ಪರಂಪರೆಯನ್ನು ವಿಶ್ವದೆಲ್ಲೆಡೆ ಪಸರಿಸುವ ಜವಾಬ್ದಾರಿ ಪದವೀಧರರ ಮೇಲಿದೆ : ಡಾ. ಸುಶ್ರುತ ಕನೌಜಿಯಾ

ವಿಕ ಸುದ್ದಿಲೋಕ ಉಡುಪಿ
ಉಡುಪಿ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 2026ನೇ ಸಾಲಿನ ಪದವಿ ಪ್ರದಾನ ಸಮಾರಂಭ ವಿಶಿಖಾನುಪ್ರವೇಶ‘ -2026 ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿನಡೆಯಿತು.

ಕಾಲೇಜಿನ ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಪದವಿ ಪಡೆದ ಎಲ್ಲವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ವಿದ್ಯಾರ್ಥಿಗಳು ತಮ್ಮ ಮುಂದಿನ ವೃತ್ತಿಜೀವನದಲ್ಲಿಯಶಸ್ಸು ಸಾಧಿಸಿ, ಆಯುರ್ವೇದ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡುವಂತಾಗಲಿ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ಭಾರತೀಯ ವೈದ್ಯಕೀಯ ಪದ್ಧತಿಯ ನೈತಿಕತೆ ಮತ್ತು ನೋಂದಣಿ ಮಂಡಳಿ (ಃಇಖಋTಒ), ರಾಷ್ಟಿ್ರೕಯ ಭಾರತೀಯ ವೈದ್ಯಕೀಯ ಪದ್ಧತಿ ಆಯೋಗದ ಅಧ್ಯಕ್ಷ ಡಾ.ಸುಶ್ರುತ ಕನೌಜಿಯಾ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿಮಹಿಳಾ ಪದವೀಧರರು ಹೊರಬರುತ್ತಿರುವುದು ಸಂತಸದ ಸಂಗತಿಯಾಗಿದೆ. ಮಹಿಳಾ ಪದವೀಧರರು ತಮ್ಮ ವೃತ್ತಿಪರ ಜವಾಬ್ದಾರಿಗಳನ್ನು ನಿರ್ವಹಿಸುವುದರಿಂದ ಹಿಂದೆ ಸರಿಯದೆ ವೈದ್ಯಕೀಯ ಕ್ಷೇತ್ರದಲ್ಲಿಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು. ದೇಶದ ಪ್ರತಿಷ್ಠಿತ ಆಯುರ್ವೇದ ಶಿಕ್ಷಣ ಸಂಸ್ಥೆಗಳಲ್ಲಿಒಂದಾದ ಎಸ್ ಡಿಎಂ ಆಯುರ್ವೇದ ಕಾಲೇಜಿನಲ್ಲಿಶಿಕ್ಷಣ ಪಡೆದಿರುವ ಪದವೀಧರರು ಸಂಸ್ಥೆಯ ಶ್ರೇಷ್ಠ ಪರಂಪರೆ ಮತ್ತು ಮೌಲ್ಯಗಳನ್ನು ತಮ್ಮವೃತ್ತಿಜೀವನದ ಮೂಲಕ ವಿಶ್ವದಾದ್ಯಂತ ಪಸರಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದರು.

ಅಧ್ಯಕ್ಷೀಯ ಭಾಷಣ ಮಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ , ಆಯುರ್ವೇದ ಕಾಲೇಜು ಸ್ಥಾಪನೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಕನಸಿನ ಯೋಜನೆಯಾಗಿದೆ ಎಂದ ಅವರು ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಆಯುರ್ವೇದವನ್ನು ಜಾಗತಿಕ ಮಟ್ಟದಲ್ಲಿಪಸರಿಸುವ ರಾಯಭಾರಿಗಳಾಗಿ ಕಾರ್ಯ ನಿರ್ವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿಸ್ನಾತಕ ಪದವೀಧರರಿಗೆ, ಸ್ನಾತಕೋತ್ತರ ಪದವೀಧರರಿಗೆ, ಪದವಿ ಹಾಗೂ ರಾರ ಯಂಕ್ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಯಿತು.

ಡಾ. ಪ್ರಶಾಂತ್ ಕೆ. ಅವರು ಪದವೀಧರರಿಗೆ ವೈದ್ಯಕೀಯ ವೃತ್ತಿಯ ಪ್ರಮಾಣ ವಚನ ಬೋಧಿಸಿದರು.

ವೈದ್ಯಕೀಯ ಅಧೀಕ್ಷಕ ಡಾ. ಜಯಕೃಷ್ಣ ನಾಯಕ್ , ಸ್ನಾತಕೋತ್ತರ ಮತ್ತು ಪಿಎಚ್ ಡಿ ವಿಭಾಗದ ಡೀನ್ ಡಾ. ಶ್ರೀಕಾಂತ್ ಪಿ., ಸ್ನಾತಕ ವಿಭಾಗದ ಡೀನ್ ಡಾ.ಪೃಥ್ವಿರಾಪ್ ಪುರಾಣಿಕ್ , ಡೀನ್ (ಆಡಳಿತ) ಡಾ. ಪ್ರಶಾಂತ್ ಕೆ. ಉಪಸ್ಥಿತರಿದ್ದರು.

ಡಾ. ಶುಭಾ ಪಿ.ಯು. ಮತ್ತು ಡಾ. ಮೇಘನಾ ಕೆ.ಎ. ಕಾರ್ಯಕ್ರಮ ನಿರೂಪಿಸಿದರು.

ಫೋಟೊ 21ಯುಕೆ ಎಸ್ ಡಿಎಂ : ಪದವಿ ಪ್ರದಾನ.