ಹೈಡ್ರೋಫೋನಿಕ್ ಗಾಂಜಾ ಜಪ್ತಿ

Contributed by: adarshkodi15@gmail.com|Vijaya Karnataka•
Vijay Karnataka
ಹೈಡ್ರೋಫೋನಿಕ್ ಗಾಂಜಾ ಜಪ್ತಿ

ಬೆಂಗಳೂರು ಗ್ರಾಮಾಂತರ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ.19ರಂದು ಪ್ರತ್ಯೇಕ ಎರಡು ಪ್ರಕರಣದಲ್ಲಿಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಒಟ್ಟು 9.62 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಆಗಮಿಸಿದ ಪ್ರಯಾಣಿಕನಿಂದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು 3.92 ಕೋಟಿ ಮೌಲ್ಯದ 11.2 ಕೆ.ಜಿ. ಹೈಡ್ರೋಫೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿಬ್ಯಾಂಕಾಕ್ ನಿಂದ ಆಗಮಿಸಿದ ಪ್ರಯಾಣಿಕನೊಬ್ಬನಿಂದ 5.7 ಕೋಟಿ ಮೌಲ್ಯದ 16.3 ಕೆ.ಜಿ. ಹೈಡ್ರೋಫೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಎರಡು ಪ್ರಕರಣದಲ್ಲಿಆರೋಪಿಯನ್ನು ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯಿದೆ 1985ರ ಅಡಿ ಬಂಧಿಸಿ, ತನಿಖೆ ಮುಂದುವರಿಸಲಾಗಿದೆ.