ಸ್ಪರ್ಧಾತ್ಮಕ ಪರೀಕ್ಷೆ, ವಿಶೇಷ ಮಾರ್ಗದರ್ಶನ ಕಾರ ್ಯಕ್ರಮ

Contributed by: naveena.channappa@timesofindia.com|Vijaya Karnataka•
Vijay Karnataka
ವಿಕ ಸುದ್ದಿಲೋಕ ಮಂಡ್ಯ

ಪದವಿ ಪಡೆದ ನಂತರ ಉದ್ಯೋಗಕ್ಕಾಗಿ ಕಾಯುವ ಬದಲು ತಮ್ಮ ಆಸಕ್ತಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯೋಜಿತ ಸಿದ್ಧತೆ ನಡೆಸಬೇಕೆಂದು ಮಂಡ್ಯದ ಕೃಷಿಕ್ ಸರ್ವೋದಯ ಟ್ರಸ್ಟ್ ನ ಜಂಟಿ ಕಾರ ್ಯದರ್ಶಿ ಡಾ.ಎಸ್ .ಟಿ. ರಾಮಚಂದ್ರ ಸಲಹೆ ನೀಡಿದರು.
ನಗರದ ಕೃಷಿಕ್ ಸರ್ವೋದಯ ಟ್ರಸ್ಟ್ ನ ಚೌಡಯ್ಯ ಸಭಾಂಗಣದಲ್ಲಿವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗಾಗಿ ಆಯೋಜಿಸಿದ್ದ ‘‘ಸ್ಪರ್ಧಾತ್ಮಕ ಪರೀಕ್ಷೆಗಳು-ಅವಕಾಶಗಳು, ಸಿದ್ಧತೆ ಮತ್ತು ಯಶಸ್ಸು’’ ಎಂಬ ವಿಶೇಷ ಮಾರ್ಗದರ್ಶನ ಕಾರ ್ಯಕ್ರಮದ ಸಮಾರೋಪ ಸಮಾರಂಭದಲ್ಲಿಅವರು ಮಾತನಾಡಿದರು.

‘‘ಬ್ಯಾಂಕಿಂಗ್ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿಉತ್ತಮ ಉದ್ಯೋಗಾವಕಾಶಗಳಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಆತ್ಮವಿಶ್ವಾಸದಿಂದ ಈ ಅವಕಾಶಗಳನ್ನು ಬಳಸಿಕೊಳ್ಳಬೇಕು. ಯುವಜನರಲ್ಲಿಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮತ್ತು ಜಾಗೃತಿ ಮೂಡಿಸುವ ಟ್ರಸ್ಟ್ ನ ಪ್ರಯತ್ನಕ್ಕೆ ಉತ್ತಮ ಸ್ಪಂದನೆ ದೊರೆತಿರುವುದು ಸಂತಸದ ಸಂಗತಿಯಾಗಿದೆ,’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಯಾಂಕಿಂಗ್ , ರೈಲ್ವೆ, ವಿಮೆ ಕ್ಷೇತ್ರ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರದ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಡಾ.ರಾಮಚಂದ್ರ ಅವರು ಸಮಗ್ರ ಮಾಹಿತಿ ನೀಡಿದರು. ಪರೀಕ್ಷೆಗಳ ಸ್ವರೂಪ, ಅರ್ಹತೆ, ಪಠ್ಯಕ್ರಮ, ಪರೀಕ್ಷಾ ಸಿದ್ಧತೆಯ ವಿಧಾನ, ಸಮಯ ನಿರ್ವಹಣೆ, ದಿನನಿತ್ಯದ ಅಧ್ಯಯನ ಕ್ರಮ, ಹಿಂದಿನ ಪ್ರಶ್ನೆಪತ್ರಿಕೆಗಳ ಅಭ್ಯಾಸ ಹಾಗೂ ಮಾದರಿ ಪರೀಕ್ಷೆಗಳ ಮಹತ್ವವನ್ನು ವಿವರಿಸಿದರು.

ಕೃಷಿಕ್ ಸರ್ವೋದಯ ಟ್ರಸ್ಟ್ ವತಿಯಿಂದ ಬ್ಯಾಂಕಿಂಗ್ ಸೇರಿದಂತೆ ನಾನಾಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೀಡಲಾಗುತ್ತಿರುವ ತರಬೇತಿ, ಮಾರ್ಗದರ್ಶನ ಹಾಗೂ ಶೈಕ್ಷಣಿಕ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಿದರು. ಕಾರ ್ಯಕ್ರಮದಲ್ಲಿವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.

..........................

(ಫೋಟೋ ಇದೆ)