ಪುರುಷ ಪ್ರಯಾಣಿಕರಿಗೆ ಪ್ರತ್ಯೇಕ ಬಸ್ ವ್ಯವಸ್ಥೆಗೆ ಆಗ್ರಹ

Contributed by: hotiblhvk@gmail.com|Vijaya Karnataka•
Vijay Karnataka
ವಿಕ ಸುದ್ದಿಲೋಕ ಬೈಲಹೊಂಗಲ

ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದ ಸರಕಾರಿ ಬಸ್ ಗಳಲ್ಲಿಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರು ಸುಗಮವಾಗಿ ಸಂಚರಿಸಲು ತೊಂದರೆಯಾಗುತ್ತಿದೆ. ಆದ್ದರಿಂದ ಪುರುಷ ಪ್ರಯಾಣಿಕರಿಗಾಗಿ ಪ್ರತ್ಯೇಕ ಬಸ್ ಗಳ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಕಾರ್ಮಿಕ ಸಂಘಟನೆಯ ವತಿಯಿಂದ ಗುರುವಾರ ನಗರದಲ್ಲಿಪ್ರತಿಭಟನೆ ನಡೆಸಲಾಯಿತು.
ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ ಬಡಾರ್ ನೇತೃತ್ವದಲ್ಲಿನಡೆದ ಪ್ರತಿಭಟನೆಯಲ್ಲಿಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘‘ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ಸರಕಾರಿ ಬಸ್ ಗಳಲ್ಲಿಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಆಸನ ದೊರೆಯದೆ ನಿಂತುಕೊಂಡೇ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಮಹಿಳೆಯರೊಂದಿಗೆ ಪುರುಷ ಪ್ರಯಾಣಿಕರಿಗೂ ಸಮಾನವಾಗಿ ಸುಗಮ ಮತ್ತು ಸುರಕ್ಷಿತ ಪ್ರಯಾಣದ ಅವಕಾಶ ಕಲ್ಪಿಸುವುದು ಸರಕಾರದ ಹೊಣೆಗಾರಿಕೆಯಾಗಿದೆ. ಆದ್ದರಿಂದ ಪುರುಷ ಪ್ರಯಾಣಿಕರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು’’, ಎಂದು ರಾಜ್ಯ ಸರಕಾರಕ್ಕೆ ಆಗ್ರಹಿಸಿದರು.

ನಂತರ ತಹಸೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ರವಾನಿಸಿದರು. ಅನೇಕ ಗಣ್ಯರು, ಕಾರ್ಮಿಕ ಸಂಘಟನೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಫೋಟೊ: (19ಹೆಚ್ ಟಿಪಿ 5):

ಪುರುಷ ಪ್ರಯಾಣಿಕರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಕಾರ್ಮಿಕ ಸಂಘಟನೆಯವರು ಬೈಲಹೊಂಗಲದಲ್ಲಿಪ್ರತಿಭಟನೆ ನಡೆಸಿದರು.