ವಿಕ ಸುದ್ದಿಲೋಕ ಕುಂದಾಣದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮದಲ್ಲಿಕನ್ನಡ ರಾಜ್ಯೋತ್ಸವವನ್ನು ಕಾರ ್ಯಕ್ರಮವನ್ನು ಗ್ರಾಮಸ್ಥರೆಲ್ಲರೂ ಒಗ್ಗೂಡಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು.
ರಾಜ್ಯೋತ್ಸವದ ಅಂಗವಾಗಿ ಗ್ರಾಮದ ಬಿಎಂಟಿಸಿ ಬಸ್ ಗೆ ಕನ್ನಡ ಬಾವುಟ, ಕನ್ನಡಪರ ಘೋಷಣೆಗಳು ಹಾಗೂ ಅಲಂಕಾರಿಕ ವಸ್ತುಗಳಿಂದ ವಿಶೇಷವಾಗಿ ಶೃಂಗರಿಸಿದ್ದು, ಪ್ರಯಾಣಿಕರು ಮತ್ತು ಸಾರ್ವಜನಿಕರ ಗಮನ ಸೆಳೆಯಿತು.
ಗ್ರಾಮದ ಜನರು ಒಗ್ಗಟ್ಟಿನಿಂದ ಕನ್ನಡದ ಹಬ್ಬವನ್ನು ಆಚರಿಸುವ ಮೂಲಕ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಮೆರೆದರು. ಕನ್ನಡ ಭಾಷೆಯ ಉಳಿವು, ಬೆಳವಣಿಗೆ ಮತ್ತು ಬಳಕೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಿದರು.
ಗ್ರಾಮಸ್ಥರ ಸಾಮೂಹಿಕ ಸಹಭಾಗಿತ್ವದಲ್ಲಿನಡೆದ ರಾಜ್ಯೋತ್ಸವ ಆಚರಣೆ ಕನ್ನಡಾಭಿಮಾನ ಮತ್ತು ಗ್ರಾಮೀಣ ಒಗ್ಗಟ್ಟಿಗೆ ಸಾಕ್ಷಿಯಾಯಿತು.