ಬೆಂಗಳೂರು ಗ್ರಾಮಾಂತರ: ಕೋಲಾರದ ಜ್ಯೋತಿ ಎಜುಕೇಷನಲ್ ಟ್ರಸ್ಟ್ ವತಿಯಿಂದ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪುರಸ್ಕಾರಕ್ಕೆ ಆಯ್ಕೆಯಾಗುವವರಿಗೆ ವಿದ್ಯಾರ್ಥಿ ವೇತನದ ಜತೆಗೆ ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಎ. ಚಲಪತಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ, ಜಾತಿ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ನ ಪ್ರತಿಯನ್ನು ಡಿಸೆಂಬರ್ 31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ.-8971120157 ಅಥವಾ 7019088940 ಸಂಖ್ಯೆಯನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ಬೆಳಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ಟ್ರಸ್ಟ್ ಕಚೇರಿಯಲ್ಲಿಸಲ್ಲಿಸಬಹುದು ಎಂದು ತಿಳಿಸಲಾಗಿದೆ.