ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿಭಕ್ತರ ಅನುಕೂಲಕ್ಕಾಗಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿನಿರ್ಮಿಸಲಾಗಿರುವ ನೂತನ ಅನ್ನಛತ್ರ ಕಟ್ಟಡ ಸೋಮವಾರ ಲೋಕಾರ್ಪಣೆಗೊಂಡಿತು.ಕ್ಷೇತ್ರಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಊಟೋಪಚಾರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನಿರ್ಮಿಸಿರುವ ಈ ಕಟ್ಟಡ, ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಸೇರ್ಪಡೆಯಾಗಿದೆ.
ಆಶೀರ್ವಚನ ನೀಡಿದ ಮಾಣಿಲ ಕ್ಷೇತ್ರದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ, ಪಣೋಲಿಬೈಲು ತಾಯಿಯ ಶಕ್ತಿ ಮತ್ತು ಕ್ಷೇತ್ರದ ಮಹಿಮೆ ಶಾಶ್ವತವಾದುದು. ಭಕ್ತರು ಕ್ಷೇತ್ರಕ್ಕೆ ನೀಡಿದ ದೇಣಿಗೆಯು ಸದುಪಯೋಗವಾಗಿ ಅನ್ನಛತ್ರದ ರೂಪದಲ್ಲಿಸಾಕಾರಗೊಂಡಿದೆ. ಮುಂದಿನ ದಿನಗಳಲ್ಲಿಕ್ಷೇತ್ರವು ಇನ್ನಷ್ಟು ಅಭಿವೃದ್ಧಿ ಹೊಂದಿ ಜಗತ್ತಿನಾದ್ಯಂತ ಬೆಳಗುವಂತಾಗಲಿ ಎಂದು ಶುಭ ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ಯು.ಟಿ. ಖಾದರ್ ಮಾತನಾಡಿ, ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕ್ಷೇತ್ರದಲ್ಲಿಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಅನ್ನಛತ್ರ ನಿರ್ಮಾಣಗೊಂಡಿರುವುದು ಸಂತಸದ ವಿಚಾರ. ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಪರಂಪರೆಯ ಸಂರಕ್ಷಣೆಗೆ ಇಂತಹ ಕಾರ್ಯಗಳು ಪೂರಕವಾಗಿವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ ್ಕ ಉಳಿಪ್ಪಾಡಿಗುತ್ತು ಮಾತನಾಡಿ, ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅನ್ನಛತ್ರವನ್ನು ನಿರ್ಮಿಸಲಾಗಿದೆ. ಪಣೋಲಿಬೈಲು ಪ್ರಸಿದ್ಧ ‘ಎ’ ದರ್ಜೆಯ ಧಾರ್ಮಿಕ ಕ್ಷೇತ್ರವಾಗಿದ್ದು, ಇಲ್ಲಿಗೆ ಬರುವ ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ದೇವಸ್ಥಾನ ಹಾಗೂ ದೈವಸ್ಥಾನಗಳು ನಮ್ಮ ನಂಬಿಕೆ, ಧಾರ್ಮಿಕ ಶ್ರದ್ಧೆ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಪವಿತ್ರ ಕೇಂದ್ರಗಳಾಗಿವೆ. ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿಒಂದಾಗಿರುವ ಪಣೋಲಿಬೈಲಿನಲ್ಲಿಭಕ್ತರ ಅನುಕೂಲಕ್ಕಾಗಿ ಅನ್ನಛತ್ರ ನಿರ್ಮಿಸಿರುವುದು ಶ್ಲಾಘನೀಯ ಕಾರ್ಯ ಎಂದರು.
ಜಿಲ್ಲಾಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಗ್ರಾಮದಲ್ಲಿರುವ ಕ್ಷೇತ್ರಕ್ಕೆ ಭೇಟಿ ನೀಡಬೇಕು. ದೇವಸ್ಥಾನಗಳ ಅಭಿವೃದ್ಧಿಯೇ ನಮ್ಮೆಲ್ಲರ ಅಭಿವೃದ್ಧಿ ಎಂದರು.
ಜಿಲ್ಲಾಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಆಡಳಿತಾಧಿಕಾರಿ ಬಂಟ್ವಾಳ ತಹಸೀಲ್ದಾರ್ ಜಿ. ಮಂಜುನಾಥ್ , ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಬುಡಾ ಅಧ್ಯಕ್ಷ ಬೇಬಿ ಕುಂದರ್ , ಗ್ಯಾರಂಟಿ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಸಜಿಪಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್ , ಕಾರ್ಯನಿರ್ವಹಣಾಧಿಕಾರಿ ದಿವಾಕರ ಮುಗುಳ್ಯ ಉಪಸ್ಥಿತರಿದ್ದರು. ಉದ್ಯಮಿ ನಗ್ರಿಗುತ್ತು ವಿವೇಕ್ ಶೆಟ್ಟಿ ಸ್ವಾಗತಿಸಿದರು. ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ಪೂಜಾರಿ ವಂದಿಸಿದರು. ದೈವಸ್ಥಾನದ ಅರ್ಚಕರು,ಸಿಬ್ಬಂದಿ, ಸಜೀಪ ಮಾಗಣೆ ಗುತ್ತಿನವರು ಹಾಗೂ ಊರಿನ ಹತ್ತು ಸಮಸ್ತರು ಕಾರ್ಯಕ್ರಮದಲ್ಲಿಭಾಗವಹಿಸಿದ್ದರು.