ಕನಕಗಿರಿ ತಾಲೂಕಿನ ಕರಡೋಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಮಲ್ಲಾಪುರ ಗ್ರಾಮದ ಜನತಾ ಓಣಿಯಲ್ಲಿ ನಡುರಸ್ತೆಯಲ್ಲೇ ಚರಂಡಿ ನೀರು ಸಂಗ್ರಹವಾಗಿದೆ.ನೀರು ಸಂಗ್ರಹವಾಗಿದ್ದರಿಂದ ಸಾಂಕ್ರಾಮಿಕ ರೋಗದ ಭೀತಿ ನಿವಾಸಿಗಳನ್ನು ಕಾಡುತ್ತಿದೆ. ಕ್ರಮಕ್ಕೆ ಮುಂದಾಗಬೇಕಿದ್ದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಮೌನವಹಿಸಿದೆ.
ಬಹಳ ದಿನಗಳಿಂದ ಚರಂಡಿ ನೀರು ಸಂಗ್ರಹವಾಗುತ್ತಿದ್ದು, ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಈ ರಸ್ತೆಯಲ್ಲಿಪ್ರತಿನಿತ್ಯ ಮಕ್ಕಳು, ವೃದ್ಧರು ಸಂಚರಿಸುತ್ತಿದ್ದಾರೆ.
ಚರಂಡಿ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದಂತಾಗಿದೆ. ಚರಂಡಿ ವ್ಯವಸ್ಥೆ ಸಮಸ್ಯೆಯಿಂದ ನೀರು ನಿಂತು ದುರ್ವಾಸನೆ ಬೀರುತ್ತಿದೆ. ನೀರು ನಿಂತಿದ್ದರಿಂದ ಸೊಳ್ಳೆಗಳ ಉತ್ಪತ್ತಿಯೊಂದಿಗೆ
ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ. ಈ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಚರಂಡಿ ವ್ಯವಸ್ಥೆ ಸರಿಪಡಿಸಬೇಕಿದೆ.
===
ಕರಡೋಣಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ನಮ್ಮ ಗ್ರಾಮದಲ್ಲಿಚರಂಡಿ ವ್ಯವಸ್ಥೆ ಕಲ್ಪಿಸಬೇಕು.
ಭೀಮೇಶ್ , ಗ್ರಾಮಸ್ಥ, ಕೆ.ಮಲ್ಲಾಪುರ
===
ಚರಂಡಿ ನೀರು ಮುಂದಕ್ಕೆ ಹರಿದು ಹೋಗಲು ಸೂಕ್ತ ಸ್ಥಳಾವಕಾಶ ಇಲ್ಲದ ಕಾರಣ ಸಮಸ್ಯೆ ಉಂಟಾಗಿದೆ. ಶೀಘ್ರದಲ್ಲೇ ಸಮಸ್ಯೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು.
- ಲಕ್ಷ್ಮಣ್ .ಕೆ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ, ಕರಡೋಣಿ
====
ಕನಕಗಿರಿ ತಾಲೂಕಿನ ಕೆ.ಮಲ್ಲಾಪುರ ಗ್ರಾಮದ ಜನತಾ ಓಣಿಯಲ್ಲಿ ಚರಂಡಿ ನೀರು ಸಂಗ್ರಹವಾಗಿರುವುದು.