ದಸರಾ ಜಾತಿ, ಧರ್ಮಕ್ಕೆ ಸೀಮಿತವಲ್ಲ

Contributed by: Mahadev Swamy|Vijaya Karnataka•
dussehra a symbol of unity peace and culture
ದಸರಾ ಜಾತಿ, ಧರ್ಮಕ್ಕೆ ಸೀಮಿತವಲ್ಲ

- ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿಯತೀಂದ್ರ ಹೇಳಿಕೆ
ವಿಕ ಸುದ್ದಿಲೋಕ ಮೈಸೂರು

ದಸರಾ ಯಾವುದೇ ಒಂದು ಧರ್ಮ ಅಥವಾ ಜಾತಿಗೆ ಸೀಮಿತವಾದ ಹಬ್ಬವಲ್ಲ. ಇದು ಕರ್ನಾಟಕದ ಸಮಸ್ತ ಜನರನ್ನು ಒಗ್ಗೂಡಿಸುವ, ನಾಡಿನ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಮಹೋತ್ಸವ ಎಂದು ಜಿಲ್ಲಾಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಚಾಮುಂಡಿಬೆಟ್ಟದಲ್ಲಿನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿಮಾತನಾಡಿ, ‘‘ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಶಾಂತಿ-ಸೌಹಾರ್ದತೆ ಪ್ರತಿಬಿಂಬಿಸುವ ನಾಡಹಬ್ಬವಾಗಿದೆ. ನಾಡಿನ ಶರಣರು, ಸಂತರು ಹಾಗೂ ಧಾರ್ಮಿಕ ಮುಖಂಡರ ಆಶೀರ್ವಾದದೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಮೈಸೂರಿನ ಜನತೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಜನರು ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ,’’ ಎಂದು ತಿಳಿಸಿದರು.

‘‘ರಾಜ್ಯ ಸರಕಾರವು ಜನಪರ ಆಡಳಿತಕ್ಕೆ ಆದ್ಯತೆ ನೀಡಿದ್ದು, ಐದು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ವಿವಿಧ ಜನಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಬದ್ಧವಾಗಿದೆ. ಜನರ ಕಲ್ಯಾಣ, ಸಾಮಾಜಿಕ ನ್ಯಾಯ ಹಾಗೂ ರಾಜ್ಯದ ಅಭಿವೃದ್ಧಿ ಸರ್ಕಾರದ ಪ್ರಮುಖ ಆದ್ಯತೆಗಳಾಗಿವೆ,’’ ಎಂದು ಹೇಳಿದರು.

ಕೋಟ್

ದಸರಾ ಹಬ್ಬವು ಕೇವಲ ಒಂದು ಆಚರಣೆಯಲ್ಲ, ಬದಲಾಗಿ ದುಷ್ಟಶಕ್ತಿಗಳ ನಿಗ್ರಹ ಹಾಗೂ ಶಕ್ತಿ ದೇವತೆಯಾದ ದುರ್ಗಾದೇವಿಯ ಧರ್ಮ ವಿಜಯದ ಸಂಕೇತವಾಗಿದೆ. ಗಂಡುಗಲಿ ಕುಮಾರರಾಮನ ಆಡಳಿತಾವಧಿಯಲ್ಲಿಶಕ್ತಿ ಪ್ರದರ್ಶನ ಹಾಗೂ ವಿಜಯದ ಸಂಕೇತವಾಗಿ ದಸರಾ ಮತ್ತು ನವರಾತ್ರಿ ಆಚರಣೆಗಳಿಗೆ ಭದ್ರ ಅಡಿಪಾಯ ಹಾಕಿದರು. ಆನಂತರ ಆನೆಗುಂದಿ ಹಾಗೂ ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ 300ಕ್ಕೂ ಹೆಚ್ಚು ವರ್ಷಗಳ ಕಾಲ ಆಚರಿಸಿಕೊಂಡು ಬರಲಾಯಿತು.

- ಶಿವರಾಜ್ ಎಸ್ . ತಂಗಡಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ

ಫೋಟೋ

ಚಾಮುಂಡಿಬೆಟ್ಟದಲ್ಲಿನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿಸಚಿವ ಯತೀಂದ್ರ ಸಿದ್ದರಾಮಯ್ಯ ಮುಖ್ಯಮಂತ್ರಿ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಅವರನ್ನು ಗೌರವಿಸಿದರು.

ಓದಲೇ ಬೇಕಾದ ಸುದ್ದಿ