ಮಾನಸಿಕ ಆರೋಗ್ಯ ದಿನಾಚರಣೆ ನಾಳೆ

Contributed by: manjunathrd59@gmail.com|Vijaya Karnataka•
mental health day celebration 2023 details about the event and guests
ವಿಕ ಸುದ್ದಿಲೋಕ ಹಾವೇರಿ

ತಾಲೂಕಿನ ಗಾಂಧಿಪುರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿಅ.14 ರಂದು ಬೆಳಗ್ಗೆ 10.30ಕ್ಕೆ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾನ್ಯಾಯವಾದಿಗಳ ಸಂಘ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿಪುರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಹಯೋಗದಲ್ಲಿಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಹಿರಿಯ ದಿವಾಣಿ ನ್ಯಾಯಾಧೀಶೆ ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಎಚ್ .ವಿ. ಉದ್ಘಾಟನೆ ನೆರವೇರಿಸಲಿದ್ದು, ಕಾಲೇಜಿನ ಪ್ರಾಚಾರ್ಯ ಡಾ.ವೈ.ಎಫ್ .ನದಾಫ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಡೀನ್ ಡಾ.ಪ್ರದೀಪಕುಮಾರ ಎಂ.ವಿ., ಜಿಲ್ಲಾಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಪಿ.ಆರ್ .ಹಾವನೂರ, ಜಿಲ್ಲಾನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್ .ಸಿ.ಸಿದ್ದನಗೌಡ್ರ, ಕಾರ್ಯದರ್ಶಿ ಪಿ.ಎಸ್ .ಹೆಬ್ಬಾಳ, ಜಿಲ್ಲಾಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚನ್ನಬಸಯ್ಯ ವಿರಕ್ತಮಠ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಅಪರಾಧ ಶಾಸ್ತ್ರ ಮತ್ತು ನ್ಯಾಯ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಚಂದ್ರಪ್ರಭಾ ಪಟಗಾರ, ಐಕ್ಯೂಎಸಿ ಸಂಯೋಜಕ ಡಾ.ಜೆ.ಸಿ.ಇಂಡಿಮಠ, ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ ಭಾಗವಹಿಸಲಿದ್ದಾರೆ. ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮನೋವೈದ್ಯೆ ಡಾ.ಶೃತಿ ಎ. ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.