ಬಂಟ್ವಾಳ ಬಿಜೆಪಿ ಯುವ ಮೋರ್ಚಾದಿಂದ ಸೇವಾ ಸಂಕಲ್ಪ ಕಾರ್ಯಕ್ರಮ

Contributed by: mambadynews@gmail.com|Vijaya Karnataka•
service commitment program held in bantwal on prime minister modis birthday
ವಿಕ ಸುದ್ದಿಲೋಕ ಬಂಟ್ವಾಳ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ನಾನಾ ಸೇವಾ ಕಾರ್ಯಕ್ರಮಗಳು ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿನಡೆಯಿತು.
ಬೆಳಗ್ಗೆ ಫಿಟ್ ಇಂಡಿಯಾ 5 ಕಿ.ಮೀ. ಮ್ಯಾರಥಾನ್ ಓಟಕ್ಕೆ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಪುಷ್ಪರಾಜ್ ಚೌಟ, ಬಂಟ್ವಾಳ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸುಪ್ರೀತ್ ಆಳ್ವ ಚಾಲನೆ ನೀಡಿದರು. ಜಿಲ್ಲಾಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಉಪಾಧ್ಯಕ್ಷ ಆಶ್ರಿತ್ ನೋಂಡ, ಕಾರ್ಯದರ್ಶಿ ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು. ಓಟ ಬಂಟ್ವಾಳ ಬೈಪಾಸ್ ಜಂಕ್ಷನ್ ವರೆಗೆ ಸಾಗಿ ಹಿಂತಿರುಗಿ ಸ್ಪರ್ಶ ಕಲಾ ಮಂದಿರದಲ್ಲಿಸಂಪನ್ನಗೊಂಡಿತು. 150ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿನಶಾ ಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕರಿಸಲಾಯಿತು.

ಬಳಿಕ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಅಂಚೆ ಕಚೇರಿ ವಿಮಾ ಸೌಲಭ್ಯ ನೋಂದಣಿ ಶಿಬಿರ, ಯುವ ಸಾಧಕರ ಸನ್ಮಾನ ಕಾರ್ಯಕ್ರಮ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ ್ಕ ಉಳಿಪ್ಪಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್ , ಜೀ ಕನ್ನಡದ ಸರಿಗಮಪ ವಿಜೇತ ಅಶ್ಮಿತ್ ಜೆ. ವಿಟ್ಲ, ವಿಶೇಷ ಪ್ರತಿಭೆ ಕೌಶಿಕ್ ಆಚಾರ್ಯ, ಭರತನಾಟ್ಯ ಕಲಾವಿದೆ ವಿದುಷಿ ಸಹನಾ ಎಂ. ಶೆಟ್ಟಿ , ಕ್ರೀಡಾ ಸಾಧಕಿ ಖುಷಿ ಸಾಲ್ಯಾನ್ ಕೆಲಿಂಜ, ಯುವ ಕಂಬಳ ಓಟಗಾರ ಕೃತಿಕ್ ಗೌಡ ಪೆಂರ್ಗಾಲು ಅವರನ್ನು ಸನ್ಮಾನಿಸಲಾಯಿತು.

ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಭಾಗವಹಿಸಿದ್ದರು. ದಿನೇಶ್ ಶೆಟ್ಟಿ ದಂಬೆದಾರ್ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಅಧ್ಯಕ್ಷ ಆರ್ . ಚೆನ್ನಪ್ಪ ಕೋಟ್ಯಾನ್ , ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಶಿವ ಪ್ರಸಾದ್ ಶೆಟ್ಟಿ, ಜಿಲ್ಲಾಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಎ. ಗೋವಿಂದ ಪ್ರಭು, ಹರಿಕೃಷ್ಣ ಬಂಟ್ವಾಳ್ , ಸಂದೇಶ್ ಶೆಟ್ಟಿ ಅರೆಬೆಟ್ಟು, ವಿಕಾಸ್ ಪುತ್ತೂರು, ಪ್ರೇಮಾನಂದ ಶೆಟ್ಟಿ, ರಾಕೇಶ್ ರೈ ಕಡೆಂಜಿ, ಜಿಲ್ಲಾಯುವಮೋರ್ಚ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ , ಪುರುಷೋತ್ತಮ್ ಸಾಲ್ಯಾನ್ ನರಿಕೊಂಬು, ಲಖಿತಾ ಶೆಟ್ಟಿ, ಹರೀಶ್ ಶೆಟ್ಟಿ ಪಡು, ಪ್ರಸಾದ್ ಕುಮಾರ್ ರೈ, ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು. ಸುರತ್ಕಲ್ ಶ್ರೀನಿವಾಸ್ ಆಸ್ಪತ್ರೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಸದಾನಂದ ಶೆಟ್ಟಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಯುವಮೋರ್ಚಾ ಬಂಟ್ವಾಳದ ಪ್ರಧಾನ ಕಾರ್ಯದರ್ಶಿ ಸಂಪತ್ ಕೋಟ್ಯಾನ್ ಕಡೇಶಿವಾಲಯ ಸ್ವಾಗತಿಸಿದರು. ಇನ್ನೊಬ್ಬ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಭಂಡಾರಿಬೆಟ್ಟು ವಂದಿಸಿದರು. ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಸಹಯೋಗದಲ್ಲಿಬಂಟ್ವಾಳ ಪುರಸಭೆಯ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಹಾಗೂ ಸಹಭೋಜನ ಕಾರ್ಯಕ್ರಮ ನಡೆಯಿತು.

ಚಿತ್ರ: 12ಬಿಎಚ್ ಯುವಮೋರ್ಚಾ