ವಿಭಿನ್ನ ಸಮುದಾಯಗಳ ಮಧ್ಯೆ ಸಂಬಂಧ ಬೆಸೆಯುವ ಶಕ್ತಿ ತುಳು ಭಾಷೆಗಿದೆ
ವಿಕ ಸುದ್ದಿಲೋಕ ಮೂಡುಬಿದಿರೆ ತುಳು ಭಾಷೆ ವಿಭಿನ್ನ ಸಮುದಾಯಗಳ ನಡುವೆ ಪ್ರೀತಿ, ಸೌಹಾರ್ದ ಮತ್ತು ಸಂಬಂಧಗಳನ್ನು ಬೆಸೆಯುವ ಶಕ್ತಿಯನ್ನು ಹೊಂದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿತುಳುಕೂಟ ಬೆದ್ರ ವತಿಯಿಂದ ಭಾನುವಾರ ಕಲ್ಪವೃಕ್ಷ ಸಭಾಂಗಣದಲ್ಲಿನಡೆದ ‘ತುಳು ಮಾನಾದಿಗೆದ ಮಿನದನ’ ಕಾರ್ಯಕ್ರಮದಲ್ಲಿಸನ್ಮಾನ ಸ್ವೀಕರಿಸಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಅವರು ತಮ್ಮ ಅಧಿಕಾರಾವಧಿಯಲ್ಲಿತುಳು ಅಕಾಡೆಮಿಯನ್ನು ಸ್ಥಾಪಿಸಿ, ಭಾಷೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿಯೂ ತುಳು ಭಾಷೆಗೆ ಮಾನ್ಯತೆ ಇದೆ. ಇಂತಹ ಭಾಷೆಯ ಬೆಳವಣಿಗೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದರು.
ತುಳುಕೂಟ ಬೆದ್ರದ ಅಧ್ಯಕ್ಷೆ ಜಯಂತಿ ಎಸ್ .ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ತುಳು ಒಕ್ಕೂಟ ಕುಡ್ಲದ ಅಧ್ಯಕ್ಷ ಎ.ಸಿ.ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು.
ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಲು ಅಧ್ಯಯನ ವರದಿ ಸಿದ್ಧಪಡಿಸುವಲ್ಲಿಪ್ರಮುಖ ಪಾತ್ರ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರನ್ನು ತುಳು ಕೂಟದ ವತಿಯಿಂದ ಸನ್ಮಾನಿಸಲಾಯಿತು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ , ಸಂಪತ್ ಸಾಮ್ರಾಜ್ಯ ಹಾಗೂ ತುಳುಕೂಟದ ಸ್ಥಾಪಕ ಅಧ್ಯಕ್ಷ ಚಂದ್ರಹಾಸ ದೇವಾಡಿಗ ಭಾಗವಹಿಸಿದ್ದರು. ತುಳುಕೂಟಕ್ಕೆ ಧ್ವನಿವರ್ಧಕ ಕೊಡುಗೆಯಾಗಿ ನೀಡಿದ ಸುಮನಾ ಚಂದ್ರಹಾಸ ದೇವಾಡಿಗ ಅವರನ್ನು ಅಭಿನಂದಿಸಲಾಯಿತು.
ತುಳುಕೂಟದ ಗೌರವ ಅಧ್ಯಕ್ಷ ಬಾಹುಬಲಿ ಪ್ರಸಾದ್ ಸ್ವಾಗತಿಸಿದರು. ಕಾರ್ಯದರ್ಶಿ ಚೇತನಾ ರಾಜೇಂದ್ರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಶ್ವೇತಾ ಜೈನ್ ಸನ್ಮಾನಪತ್ರ ವಾಚಿಸಿದರು. ಕಾರ್ಯಕ್ರಮಕ್ಕೂ ಮೊದಲು ವಾಯ್ ್ಸ ಆಫ್ ಆರಾಧನ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.