ಧಾರ್ಮಿಕ ಆಚರಣೆಗಳು ನಿರಂತರವಾಗಿ ನಡೆಯಲಿ: ವೀರು ಶೆಟ್ಟಿ

Contributed by: aravindahebbar1971@gmail.com|Vijaya Karnataka•
no timelines to assist in conducting religious celebrations respectfully veera shetty
ಬಳಂಜದಲ್ಲಿನಾಲ್ಕನೇ ವರ್ಷದ ಸಾರ್ವಜನಿಕ ಶಾರದೋತ್ಸವದ ಧಾರ್ಮಿಕ ಸಭೆ

ವಿಕ ಸುದ್ದಿಲೋಕ ಬೆಳ್ತಂಗಡಿ
ತುಳುನಾಡಿನಲ್ಲಿಧಾರ್ಮಿಕ ಆಚರಣೆಗಳಿಗೆ ವಿಶೇಷÜ ಮಹತ್ವವಿದೆ. ಇಲ್ಲಿನ ಜನರು ದೇವರ ಆರಾಧನೆಯಲ್ಲಿಅಪಾರ ನಂಬಿಕೆ ಹೊಂದಿದ್ದು, ಹಿರಿಯರ ಕಾಲದಿಂದಲೂ ಧಾರ್ಮಿಕ ಆಚರಣೆಗಳನ್ನು ಶ್ರದ್ಧಾ ಭಕ್ತಿಯಿಂದ ನಡೆಸಿಕೊಂಡು ಬರುತ್ತಿದ್ದಾರೆ. ಇಂತಹ ಆಚರಣೆಗಳು ಮುಂದಿನ ತಲೆಮಾರಿಗೂ ಮುಂದುವರಿಯಬೇಕು. ಗಣೇಶ ಚತುರ್ಥಿ, ಶಾರದಾ ಪೂಜೆಯಂತಹ ಧಾರ್ಮಿಕ ಉತ್ಸವಗಳು ನಿರಂತರವಾಗಿ ನಡೆಯಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಹೇಳಿದರು.

ಅವರು ಭಾನುವಾರ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ವತಿಯಿಂದ ಆಯೋಜಿಸಲಾದ ನಾಲ್ಕನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಧಾರ್ಮಿಕ ಸಭೆಯಲ್ಲಿಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ಪ್ರತಿಯೊಬ್ಬರಲ್ಲೂಧಾರ್ಮಿಕ ಪ್ರಜ್ಞೆ ಬೆಳೆದಾಗ ಸುಂದರ ಸಮಾಜ ನಿರ್ಮಾಣ ಸಾಧ್ಯ. ಬಳಂಜದ ಶ್ರೀ ಗುರುನಾರಾಯಣ ಸಂಘವು ಹಿರಿಯರ ಮಾರ್ಗದರ್ಶನದಲ್ಲಿಕಳೆದ 48 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ. ಇನ್ನೆರಡು ವರ್ಷಗಳಲ್ಲಿಸಂಘವು 50ನೇ ವಷÜರ್ ದ ಸಂಭ್ರಮ ಆಚರಿಸಲಿದ್ದು, ಅದನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ನಡೆಸಬೇಕು. ಇದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಉಜಿರೆಯ ಬದುಕು ಕಟ್ಟೋಣ ತಂಡದ ಸಂಚಾಲಕ, ಉದ್ಯಮಿ ಕೆ. ಮೋಹನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇವರ ಆರಾಧನೆ ಎಂದರೆ ಪ್ರಕೃತಿಯ ಆರಾಧನೆಯೂ ಹೌದು. ದೇವರ ಮೇಲಿನ ನಂಬಿಕೆಯೇ ಇಂತಹ ಧಾರ್ಮಿಕ ಆಚರಣೆಗಳನ್ನು ಶ್ರದ್ಧೆಯಿಂದ ನಡೆಸಲು ಪ್ರೇರಣೆಯಾಗಿದೆ ಎಂದರು

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ , ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾ್ಠನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಕರ್ನಾಟಕ ಸಾವಯವ ಕೃಷಿ ಯೋಜನೆಯ ಆಡಳಿತ ನಿರ್ದೇಶಕ ಮೋಹನ್ ಗೌಡ ಕಲ್ಮಂಜ, ಅಳದಂಗಡಿ ಪ್ಯಾಕ್ಸ್ ಅಧ್ಯಕ್ಷ ರಾಕೇಶ್ ಹೆಗ್ಡೆ, ಅಳದಂಗಡಿ ಮೆಸ್ಕಾಂ ಕಿರಿಯ ಎಂಜಿನಿಯರ್ ಸಂದೀಪ್ ಕುಮಾರ್ ಕೆ.ಎಸ್ . ಹಾಗೂ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ್ ಬಿ. ಶುಭ ಹಾರೈಸಿದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಭಾರತಿ ಸಂತೋಷ್ ಹಾಗೂ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಶರತ್ ಅಂಚನ್ ಉಪಸ್ಥಿತರಿದ್ದರು. ಚಂದ್ರಹಾಸ ಕಾರ್ಯಕ್ರಮ ನಿರೂಪಿಸಿದರು.

18ಎಂಜೆ ವೀರು ಬಳಂಜ.

ಚಿತ್ರ ವಿವರ-

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಅವರನ್ನು ಗೌರವಿಸಲಾಯಿತು.

ಓದಲೇ ಬೇಕಾದ ಸುದ್ದಿ