ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಪ್ರಸಿದ್ಧ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸೇರಿದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿ, ಅಂಗಡಿಗಳನ್ನು ಬಾಡಿಗೆಗೆ ನೀಡುವ ಮೂಲಕ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ. ದೇವಸ್ಥಾನದ ಎದುರು 1923ರಲ್ಲಿಕಾಯ್ದಿರಿಸಲಾಗಿದ್ದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ದೂರಿನಲ್ಲಿಉಲ್ಲೇಖಿಸಲಾಗಿದೆ.
2012ರಿಂದ 2017ರವರೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದವರು ತಮ್ಮ ಅಧಿಕಾರಾವಧಿಯಲ್ಲಿದೇವಸ್ಥಾನದ ಜಾಗವನ್ನು ಖಾಸಗಿ ಟ್ರಸ್ಟ್ ನ ಜಾಗದೊಂದಿಗೆ ಅಕ್ರಮವಾಗಿ ಸೇರಿಸಿಕೊಂಡಿದ್ದಾರೆ. ಅಲ್ಲದೆ, ಗ್ರಾಮ ಪಂಚಾಯಿತಿ ಅಥವಾ ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಪೂರ್ವಾನುಮತಿ ಪಡೆಯದೆ ಈ ಜಾಗದಲ್ಲಿಐದು ಅಂಗಡಿಗಳನ್ನು ನಿರ್ಮಿಸಲಾಗಿದೆ. ಈ ಅಂಗಡಿಗಳನ್ನು ಅಧಿಕೃತ ದಾಖಲೆಗಳಿಲ್ಲದೆ ಇತರ ವ್ಯಕ್ತಿಗಳಿಗೆ ಬಾಡಿಗೆಗೆ ನೀಡಿ, ಅವರಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪವನ್ನೂ ದೂರಿನಲ್ಲಿಮಾಡಲಾಗಿದೆ.
ಸೂಕ್ತ ತನಿಖೆಗೆ ಆಗ್ರಹ: ದೇವಸ್ಥಾನಕ್ಕೆ ಸೇರಿದ ಜಾಗದ ಒತ್ತುವರಿ, ಅನಧಿಕೃತ ಕಟ್ಟಡ ನಿರ್ಮಾಣ, ಅಂಗಡಿಗಳ ಬಾಡಿಗೆ ವ್ಯವಹಾರ ಹಾಗೂ ಹಣ ವಸೂಲಿಗೆ ಸಂಬಂಧಿಸಿದ ಆರೋಪಗಳನ್ನು ಸಮಗ್ರವಾಗಿ ತನಿಖೆ ನಡೆಸಬೇಕು. ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ದೂರಿನಲ್ಲಿಆಗ್ರಹಿಸಿದ್ದಾರೆ.