ಅನಂತಪೂರ ಕೆರೆಗೆ ನೀರು ಹರಿಸಲು ಆಗ್ರಹ

Contributed by: s.aparaj7978@gmail.com|Vijaya Karnataka•
farmers demand water to flow to ananthapur lake
ಧಿ- ಜತ್ತ- ಜಾಂಬೋಟಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ವಿಕ ಸುದ್ದಿಲೋಕ ಅಥಣಿ
ತಾಲೂಕಿನ ಅನಂತಪೂರ ಗ್ರಾಮದಲ್ಲಿಬಸವೇಶ್ವರ ಏತ ನೀರಾವರಿ ಯೋಜನೆ ಕಾಲುವೆ ಮೂಲಕ ಕೃಷ್ಣಾ ನದಿಯಿಂದ ಗ್ರಾಮದ ಕೆರೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ಮತ್ತು ಗ್ರಾಮಸ್ಥರು ಬುಧವಾರ ಜತ್ತ- ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಗ್ರಾಮದ ಕೆರೆಗೆ ನೀರು ತುಂಬಿಸುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವುದರ ಜತೆಗೆ ಅಂತರ್ಜಲ ಮಟ್ಟ ಹೆಚ್ಚಳವಾಗಿ ಕುಡಿಯುವ ನೀರಿನ ಸಮಸ್ಯೆಗೂ ಶಾಶ್ವತ ಪರಿಹಾರ ದೊರೆಯಲಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಕಾಲುವೆ ಮೂಲಕ ಕೆರೆಗೆ ನೀರು ಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಾದಾಸಾಹೇಬ ಶಿಂಧೆ ಮಾತನಾಡಿ, ‘‘ಅನಂತಪೂರ ಗ್ರಾಮದ ಕೆರೆಗೆ ನೀರು ಹರಿಸುವಂತೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಿಲ್ಲ. ಹಾಗಾಗಿ ಬೇಡಿಕೆ ಈಡೇರುವವರೆಗೆ ಹೋರಾಟ ನಿಲ್ಲಿಸುವುದಿಲ್ಲ. ತಕ್ಷಣವೇ ಕೆರೆಗೆ ನೀರು ಹರಿಸದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಹಾಗೂ ಶಾಶ್ವತ ಪರಿಹಾರ ಸಿಗುವವರೆಗೆ ರಸ್ತೆ ತಡೆ ಚಳವಳಿ ಮುಂದುವರಿಸುವುದಾಗಿ,’’ ಎಚ್ಚರಿಕೆ ನೀಡಿದರು.

ಅಗತ್ಯ ಕ್ರಮ: ಅಥಣಿ ತಹಸೀಲ್ದಾರ ಸಿದರಾಯ ಭೋಸಗಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ, ‘‘ಕೆರೆಗೆ ನೀರು ಹರಿಸುವ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು,’’ ಎಂದು ಭರವಸೆ ನೀಡಿದರು.

ದಾದಾಸಾಹೇಬ ಶಿಂಧೆ, ಶಿವಾನಂದ ಖೋತ, ಓಂಪ್ರಕಾಶ ಡೊಳ್ಳಿ, ಶೇಖರ ತೇಲಿ, ಅಶೋಕ ಪಾಟೀಲ, ರಾಜು ಸಾಲಿಮಠ ಸೇರಿದಂತೆ ಅನೇಕ ಗ್ರಾಮಸ್ಥರು ಹಾಗೂ ರೈತರು ಭಾಗವಹಿಸಿದ್ದರು.

ಧಿಧಿಧಿಧಿ-------------------

- 21ಅಥಣಿ2

ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತರು ಜತ್ತ- ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಓದಲೇ ಬೇಕಾದ ಸುದ್ದಿ