ಹೇಳಿದ ಡಾ.ಯತೀಂದ್ರ ಸಿದ್ದರಾಮಯ್ಯ- ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ
ವಿಕ ಸುದ್ದಿಲೋಕ ಮೈಸೂರು
ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಆಗಮಿಸಿದ್ದ ವೇಳೆ ಪೊಲೀಸ್ ಸಿಬ್ಬಂದಿ ಲಾಠಿ ಏಟಿನಿಂದ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಆರೋಗ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಚಾರಿಸಿದರು.
ಬನ್ನಿಮಂಟಪದ ನಿವಾಸಿ ನಾಗರಾಜು ಹಾಗೂ ಸೌಮ್ಯ ದಂಪತಿ ಪುತ್ರಿ ಗಂಭೀರವಾಗಿ ಗಾಯಗೊಂಡ ಬಾಲಕಿ. ಗುರುವಾರ ರಾತ್ರಿ ಆಸ್ಪತ್ರೆಗೆ ಖುದ್ದು ಭೇಟಿ ನೀಡಿ ಸಚಿವರು ಯೋಗಕ್ಷೇಮ ವಿಚಾರಿಸಿದರು. ಈ ದುರ್ಘಟನೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಕುಟುಂಬಸ್ಥರಿಗೆ ಸಚಿವರು ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಮಗುವಿನ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡು, ಮಗು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಅಲ್ಲದೆ, ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ಅತ್ಯುತ್ತಮ ವೈದ್ಯಕೀಯ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ. ಆರ್ಥಿಕ ಸಹಾಯ ದೊರೆಯುವಂತೆ ಕ್ರಮ ವಹಿಸುವೆ ಹಾಗೂ ವೈಯಕ್ತಿಕವಾಗಿಯೂ ಧನಸಹಾಯ ಮಾಡುವ ಅಭಯ ನೀಡಿದರು.
ಸಾರ್ವಜನಿಕರ ರಕ್ಷಣೆಗೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಇರಬೇಕಾದ ಪೊಲೀಸರಿಂದ ಇಂತಹ ದುರದೃಷ್ಟಕರ ಘಟನೆಗಳು ಸಂಭವಿಸಿರುವುದು ಅತ್ಯಂತ ನೋವಿನ ಸಂಗತಿ. ಈ ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕೂಡಲೇ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಯಾವುದೇ ನಿರ್ದಾಕ್ಷಿಣ್ಯವಿಲ್ಲದೆ ಕಠಿಣ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಹಾಗೂ ನಗÃ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಇದ್ದರು.