24ರಂದು ವಿವೇಕಾನಂದ ಇಂಜಿನಿಯರಿಗ್ ಕಾಲೇಜಿನ ಪದವಿ ಪ್ರ¨

Contributed by: sudhakara.kannadamoole@timesofindia.com|Vijaya Karnataka•
graduation ceremony at vivekananda engineering college
24ರಂದು ವಿವೇಕಾನಂದ ಇಂಜಿನಿಯರಿಗ್ ಕಾಲೇಜಿನ ಪದವಿ ಪ್ರದಾನ

ವಿಕ ಸುದ್ದಿಲೋಕ ಪುತ್ತೂರು
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಅ.24ರಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿನಡೆಯಲಿದೆ.

2025-26ನೇ ಸಾಲಿನಲ್ಲಿವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ನಡೆಸಿದ ಇಂಜಿನಿಯರಿಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಪ್ರತೀ ವಿಭಾಗದಲ್ಲಿ ಉನ್ನತ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಗುತ್ತದೆ.

ಬೆಳಗ್ಗೆ 10.30 ಗಂಟೆಗೆ ನಡೆಯುವ ಸಮಾರಂಭದಲ್ಲಿವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ ನಾರಾಯಣ ಕೆ.ಎಂ. ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಇದರ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭಯ್ ಅನಂತ್ ಗುಪ್ತೆ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ ಎಂದು ಪ್ರಿನ್ಸಿಪಾಲ್ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.