ಮೊರಾರ್ಜಿ ವಸತಿ ಶಾಲೆ ಮಂಜೂರಿಗೆ ಮನವಿಶಾಸಕ ರಾಜಾ ವೇಣುಗೋಪಾಲ ನಾಯಕಗೆ ಒತ್ತಾಯ
ವಿಕ ಸುದ್ದಿಲೋಕ ಕಕ್ಕೇರಾ
ಸುರಪುರ ತಾಲೂಕಿನ ಕಕ್ಕೇರಾ ಹೋಬಳಿಯಲ್ಲಿಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು ಮಾಡುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸಮಾಜ ಕಲ್ಯಾಣ ಸಚಿವ ಕೆ.ಎಚ್ .ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಕ್ಕೇರಾ ಹೋಬಳಿಯಲ್ಲಿಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ತೆರಳಬೇಕಾದ ಪರಿಸ್ಥಿತಿಯಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಹೀಗಾಗಿ ಸ್ಥಳೀಯವಾಗಿ ಈ ಭಾಗದಲ್ಲಿಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅನುಕೂಲ ಕಲ್ಪಿಸುವುದು ಅಗತ್ಯವಾಗಿದೆ. ವಸತಿ ಶಾಲೆ ಸ್ಥಾಪನೆಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶಗಳು ಹೆಚ್ಚಲಿವೆ. ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಮನವರಿಕೆ ಮಾಡಿದ್ದಾರೆ. ಆದ್ದರಿಂದ ಕಕ್ಕೇರಾ ಹೋಬಳಿಯಲ್ಲಿವಸತಿ ಶಾಲೆ ಮಂಜೂರು ಮಾಡಿ, ಈ ಭಾಗದ ವಿದ್ಯಾರ್ಥಿಗಳ ಶೈಕ್ಷಣßಕ ಅಭಿವೃದ್ಧಿಗೆ ಅನುಕೂಲ ಕಲ್ಪಿಸಬೇಕು ಎಂದು ಸಚಿವರನ್ನು ಅವರು ಒತ್ತಾಯಿಸಿದ್ದಾರೆ.