ವಾಣಿ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿಶೇಷ ಶಿಬಿರ ಸಮಾರೋಪ

Contributed by: aravindahebbar1971@gmail.com|Vijaya Karnataka•
national service scheme youth event at vani college
ವಿಕ ಸುದ್ದಿಲೋಕ ಬೆಳ್ತಂಗಡಿ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ದೇಶದ ಪ್ರಗತಿಯಲ್ಲಿಯುವಜನರ ಪಾತ್ರ ಮಹತ್ವದ್ದಾಗಿದೆ. ಯುವಜನರು ಸಂಘಟಿತರಾಗಿ ಸಮಾಜಮುಖಿ ಕಾರ್ಯಗಳಲ್ಲಿತೊಡಗಿಸಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂಬ ಆಶಯದೊಂದಿಗೆ ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಪೆರ್ಲ-ಬೈಪಾಡಿಯ ಸರಕಾರಿ ಪ್ರೌಢಶಾಲೆಯಲ್ಲಿಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರ ಶನಿವಾರ ಸಮಾರೋಪಗೊಂಡಿತು.
ಏಳು ದಿನಗಳ ಕಾಲ ನಶಾ ಮುಕ್ತ ಅಭಿಯಾನ ಧ್ಯೇಯವಾಕ್ಯದೊಂದಿಗೆ ನಡೆದ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ವಿಷ್ಣುಪ್ರಕಾಶ್ ಎಂ. ವಹಿಸಿದ್ದರು. ಮಹಾಬಲ ಗೌಡ ನಾಗಂದೋಡಿ ಸಮಾರೋಪ ಭಾಷಣ ಮಾಡಿದರು. ವಾಣಿ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ನಿರ್ದೇಶಕ ಕೃಷ್ಣಪ್ಪ ಗೌಡ ದೇವಸ್ಯ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕ ದಿನೇಶ್ ಕೊಯ್ಯೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಮಾತನಾಡಿ, ಭಾರತವು ಭವ್ಯ ರಾಷ್ಟ್ರವಾಗಿ ಬೆಳೆಯಬೇಕಾದರೆ ಯುವಜನರು ಸಂಘಟನೆಗಳಲ್ಲಿಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ದೇಶದಲ್ಲಿಯುವಜನರ ಸಂಖ್ಯೆ ಹೆಚ್ಚಿದ್ದು, ಅವರ ಸಾಮರ್ಥ್ಯವನ್ನು ರಾಷ್ಟ್ರದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದರು.

ಬಂದಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿನೇಶ್ ಖಂಡಿಗ, ಪೆರ್ಲ-ಬೈಪಾಡಿ ಎಸ್ ಕೆಡಿಆರ್ ಡಿಪಿ ಒಕ್ಕೂಟದ ಅಧ್ಯಕ್ಷ ಶಶಿಧರ ಗೌಡ ಬಾಲಂಪಾಡಿ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕ ಅನಂತರಾಮ ಶಬರಾಯ, ವಾಸಪ್ಪ ಗೌಡ, ದೇವಸ್ಥಾನದ ಆನುವಂಶಿಕ ಮೊಕ್ತೇಸರ ಹರೀಶ್ ಕೋಡಿಮಜಲು, ಪ್ರೌಢಶಾಲೆಯ ಎಸ್ ಡಿಎಂಸಿ ಸದಸ್ಯ ವಸಂತ ನಾಯ್ಕ, ಸಿದ್ಧಿವಿನಾಯಕ ಯುವಕ ಮಂಡಲದ ಅಧ್ಯಕ್ಷ ರಾಧಾಕೃಷ್ಣ ಪಾರೊಟ್ಟು, ಬಂದಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪರಮೇಶ್ವರಿ, ಉದ್ಯಮಿ ಪ್ರಶಾಂತ್ ನಿರ್ಮುಡ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ಕೆ., ಶಿಕ್ಷಕ ಮಹೇಶ್ , ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ಸಂಘದ ಕಾರ್ಯದರ್ಶಿ ಲೀಲಾವತಿ ಹಾಗೂ ಪ್ರಗತಿಪರ ಕೃಷಿಕ ಜನಾರ್ದನ ಗೌಡ ನಿರ್ಮುಡ ಉಪಸ್ಥಿತರಿದ್ದರು.

ಶಿಬಿರಾಧಿಕಾರಿ ದಿನೇಶ್ ಗೌಡ ಯು. ಸ್ವಾಗತಿಸಿದರು. ಸಹ ಶಿಬಿರಾಧಿಕಾರಿ ಶ್ರಾವ್ಯ ಶಿಬಿರದ ವರದಿ ಮಂಡಿಸಿದರು. ಉಪನ್ಯಾಸಕ ಬೆಳಿಯಪ್ಪ ಕೆ. ವಂದಿಸಿದರು. ಉಪನ್ಯಾಸಕಿ ಅನುರಾಧ ಕೆ. ರಾವ್ ಕಾರ್ಯಕ್ರಮ ನಿರೂಪಿಸಿದರು.

18ಎಂಜೆ ವಾಣಿ ಎನ್ನೆಸ್ಸೆಸ್ .

ಚಿತ್ರ ವಿವರ-

ವಾಣಿ ಕಾಲೇಜಿನ ಪ್ರಿನ್ಸಿಪಾಲ್ ವಿಷ್ಣು ಪ್ರಕಾಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.