ಉಡುಪಿಯ ಎಸ್ ಡಿಎಂ ಆಯುರ್ವೇದ ಆಸ್ಪತ್ರೆಯ ಬಳಕೆಗೆ ಹಸ್ತಾಂತರ
ವಿಕ ಸುದ್ದಿಲೋಕ ಉಜಿರೆಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಬ್ಯಾಂಕ್ ವತಿಯಿಂದ ಫೋರ್ಸ್ ಮೋಟರ್ಸ್ ಕಂಪನಿಯ ತೂಫಾನ್ ಮಾದರಿಯ ಆಂಬ್ಯುಲೆನ್ಸ್ ನ್ನು ಕೊಡುಗೆಯಾಗಿ ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿನಡೆದ ಕಾರ್ಯಕ್ರಮದಲ್ಲಿಕರ್ನಾಟಕ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎಂ. ಭಟ್ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಉಪಾಧ್ಯಕ್ಷ ಡಿ.ಸುರೇಂದ್ರ ಕುಮಾರ್ , ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ , ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ., ಯೋಜನಾ ನಿರ್ದೇಶಕ ಡಿ.ಶ್ರೇಯಸ್ ಕುಮಾರ್ ಸಮ್ಮುಖದಲ್ಲಿಆಂಬ್ಯುಲೆನ್ಸ್ ಹಸ್ತಾಂತರಿಸಿದರು.
ಬಳಿಕ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ . ಉಪಸ್ಥಿತಿಯಲ್ಲಿಆಂಬ್ಯುಲೆನ್ಸ್ ನ್ನು ಉಡುಪಿಯ ಎಸ್ ಡಿಎಂ ಆಯುರ್ವೇದ ಆಸ್ಪತ್ರೆಯ ಬಳಕೆಗಾಗಿ ಹಸ್ತಾಂತರಿಸಿದರು.
ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಹಣಕಾಸು ಅಧಿಕಾರಿ ಅರವಿಂದ್ ಪಿ., ವಾಹನಗಳ ಸಂಯೋಜಕ ನಿಶಿತ್ ಕುಮಾರ್ , ಎಸ್ ಡಿಎಂ ಆಯುರ್ವೇದ ಆಸ್ಪತ್ರೆಯ ಪ್ರಿನ್ಸಿಪಾಲ್ ಡಾ. ಮಮತಾ ಕೆ.ವಿ., ವೈದ್ಯಕೀಯ ಅಧೀಕ್ಷಕ ಡಾ. ಜಯಕೃಷ್ಣ ನಾಯಕ್ ಹಾಗೂ ವ್ಯವಸ್ಥಾಪಕ ರಮಾನಂದ ಕಾರಂತ್ ಕೆ., ಕರ್ನಾಟಕ ಬ್ಯಾಂಕ್ ನ ಮಂಗಳೂರು ಪ್ರಧಾನ ಕಚೇರಿಯ ಸಹಾಯಕ ಮಹಾಪ್ರಬಂಧಕ ರಮೇಶ್ ವೈದ್ಯ, ಉಡುಪಿ ಪ್ರಾದೇಶಿಕ ಕಚೇರಿಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಮುಖ್ಯ ವ್ಯವಸ್ಥಾಪಕಿ ಪಲ್ಲವಿ ಟಿ.ಎಸ್ ., ಉಡುಪಿ ಕಾರ್ ಸ್ಟ್ರೀಟ್ ಶಾಖೆಯ ಹಿರಿಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಂ. ರಾವ್ ಮತ್ತಿತರರು ಉಪಸ್ಥಿತರಿದ್ದರು.
ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಕರ್ನಾಟಕ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಎಂ. ಭಟ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
ಫೋಟೋ :23ಕೆಎನ್ ಕರ್ನಾಟಕ
ಕರ್ನಾಟಕ ಬ್ಯಾಂಕ್ ನಿಂದ ಎಸ್ ಡಿಎಂ ಶಿಕ್ಷಣ ಸಂಸ್ಥೆಗೆ ಆಂಬ್ಯುಲೆನ್ಸ್ ಹಸ್ತಾಂತರಿಸಲಾಯಿತು.