ಕೊಪ್ಪಳ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ26 ರಂದು ಬೆಳಗ್ಗೆ 9.30ಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿಭಾವಚಿತ್ರಕ್ಕೆ ಗೌರವ ಸಮರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಗುವುದು. ಜಿಲ್ಲಾಮಟ್ಟದ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಹಾಜರಾಗಬೇಕು. ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿಕಡ್ಡಾಯವಾಗಿ ಜಯಂತಿ
ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ತಿಳಿಸಿದ್ದಾರೆ.
28ಕ್ಕೆ ಸಂದದರ್ಶನ
ಕೊಪ್ಪಳ: ಗಂಗಾವತಿಯ ಎಲ್ ಟಿ ಫೈನಾನ್ಸ್ ಅವರಿಂದ ಅ.28 ರಂದು ಸಂದರ್ಶನ ಆಯೋಜಿಸಲಾಗಿದೆ. ಪಿಯುಸಿ ಹಾಗೂ ಪದವಿ ಪಡೆದ 18 ರಿಂದ 30 ವರ್ಷದೊಳಗಿನ ನಿರುದ್ಯೋಗಿ ಯುವಕ, ಯುವತಿಯರು ಭಾಗವಹಿಸಬಹುದು. ಪ್ರಮಾಣ ಪತ್ರಗಳ 3 ಪ್ರತಿ, ಆಧಾರ್ ಕಾರ್ಡ್ , ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.