26ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Contributed by: rudraiah4084@gmail.com|Vijaya Karnataka•
maharshi valmiki jayanti celebrated on 26th with reverence and cultural festivities
26ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ವಿಕ ಸುದ್ದಿಲೋಕ, ಚಿಕ್ಕಮಗಳೂರು
ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ. 26ರಂದು ನಗರದಲ್ಲಿಶ್ರದ್ಧಾಭಕ್ತಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶ್ರೀ ವಾಲ್ಮೀಕಿ ನಾಯಕ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿ, ವಾಲ್ಮೀಕಿ ನಾಯಕ ಯುವಕರ ಸಂಘ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 9.30ಕ್ಕೆ ತಾಲೂಕು ಕಚೇರಿ ಆವರಣದಿಂದ ಮೆರವಣಿಗೆ ಆರಂಭವಾಗಿ, ಎಂ.ಜಿ. ರಸ್ತೆಯ ಮೂಲಕ ಕುವೆಂಪು ಕಲಾಮಂದಿರ ತಲುಪಲಿದೆ. ಜಯಂತಿ ಅಂಗವಾಗಿ ಕಲಾಮಂದಿರದಲ್ಲಿರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದರು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು, ಪಿಎಚ್ ಡಿ ಪದವಿ ಪಡೆದವರು ಹಾಗೂ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಅಭ್ಯರ್ಥಿಗಳನ್ನು ಜಿಲ್ಲಾಡಳಿತದಿಂದ ಗೌರವಿಸಲಾಗುವುದು. ಕಾರ್ಯಕ್ರಮಕ್ಕೆ ಜಿಲ್ಲೆಯ ದಲಿತಪರ ಒಕ್ಕೂಟಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕನ್ನಡಪರ ಹಾಗೂ ರೈತಪರ ಸಂಘಟನೆಗಳ ಮುಖಂಡರು, ಸಮಾಜದ ಗಣ್ಯರು, ಚುನಾಯಿತ ಜನಪ್ರತಿನಿಧಿಗಳು, ಸರಕಾರಿ ನೌಕರರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸಂಘದ ಮುಖಂಡರಾದ ವಿಜಯ್ ಕುಮಾರ್ , ಶ್ರೀಧರ್ , ಕುಮಾರ್ , ಮಧುಕುಮಾರ್ ಹಾಗೂ ಉಮೇಶ್ ಕುನ್ನಾಳು ಉಪಸ್ಥಿತರಿದ್ದರು.

ಫೋಟೋ:23ರುದ್ರಯ್ಯ-ಪಿ2- ಜಗದೀಶ್ ಕೋಟೆ