ಮಲಿಕವಾಡ- ದತ್ತವಾಡ ಬ್ರಿಜ್ ಕಂ ಬ್ಯಾರೇಜ್ ಕಾಮಗಾರಿ ಪೂರ್ಣಗೊಂಡಿದ್ದು, ಈ ಯೋಜನೆಯಿಂದ ಈ ಭಾಗದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರಕುವುದರೊಂದಿಗೆ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ಸಾಧ್ಯವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, 4 ಕೋಟಿ ರೂ. ವೆಚ್ಚದ ಬ್ಯಾರೇಜ್ ಗೆ 4 ಹಂತಗಳಲ್ಲಿಗೇಟ್ ಅಳವಡಿಸಿ ನೀರು ಸಂಗ್ರಹಿಸುವುದರಿಂದ ಸುತ್ತಮುತ್ತಲಿನ ಸಾವಿರಾರು ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯುವ ನಿರೀಕ್ಷೆಯಿದೆ. ಮಳೆಗಾಲದಲ್ಲಿನದಿಯ ಮೂಲಕ ಹರಿದುಹೋಗುವ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳುವುದರಿಂದ ಬೇಸಿಗೆಯಲ್ಲಿಎದುರಾಗುವ ನೀರಿನ ಕೊರತೆ ನಿವಾರಿಸಬಹುದು. ಅಲ್ಲದೆ, ಜಾನುವಾರುಗಳಿಗೂ ನೀರು ಲಭ್ಯವಾಗಲಿದೆ.
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿನೀರಾವರಿ ಹಾಗೂ ಜಲಸಂರಕ್ಷಣಾ ಯೋಜನೆಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿಶಾಸಕ ಗಣೇಶ ಹುಕ್ಕೇರಿ ಅವರ ಸಹಕಾರದೊಂದಿಗೆ ಮಲಿಕವಾಡ- ದತ್ತವಾಡ ಬ್ಯಾರೇಜ್ ಕಾಮಗಾರಿ ಪೂರ್ಣಗೊಳಿಸಿ, ನೀರು ಸಂಗ್ರಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಯೋಜನೆಯಿಂದ ಜನರಿಗೆ ದೀರ್ಘಕಾಲೀನ ಪ್ರಯೋಜನ ದೊರೆಯುವ ವಿಶ್ವಾಸವಿದೆ. ಜನರ ಮೂಲ ಅಗತ್ಯಗಳನ್ನು ಪೂರೈಸುವುದು, ಕೃಷಿ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಹಾಗೂ ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿಇನ್ನು ಮುಂದೆಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.