ವಿಕ ಸುದ್ದಿಲೋಕ ಕುಕನೂರು ( ಕೊಪ್ಪಳ )ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಆಧರಿಸಿ, ಯುವಕನೊಬ್ಬನನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಾಲೂಕಿನ ಮಂಡಲಗೇರಿ ಗ್ರಾಮದ ನವೀನ ಪರಸಣ್ಣನವರ್ (20) ಬಂಧಿತ. ಸಂತ್ರಸ್ತ ಬಾಲಕಿಯ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಬಾಲಕಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.