ರೋಟರಿ ಕ್ಲಬ್ ಬೆಳ್ಳಾರೆ ಟೌನ್ , ಇಂಟರಾರ ಯಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆ ಆಶ್ರಯದಲ್ಲಿಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ ಜಾಗೃತಿ ಕಾರ್ಯಕ್ರಮ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿನಡೆಯಿತು.ಮಂಗಳೂರು ಕೆಎಂಸಿಯ ಪ್ರಾಧ್ಯಾಪಕ ರಂಜನ್ ಮಾತನಾಡಿ, ತುರ್ತು ಪರಿಸ್ಥಿತಿಯಲ್ಲಿಗಾಬರಿಯಾಗದೆ ಸೂಕ್ತ ರೀತಿಯಲ್ಲಿಸ್ಪಂದಿಸುವುದು, ರೋಗಿಯ ಸುರಕ್ಷತೆ ಹಾಗೂ ತಕ್ಷಣ ವೈದ್ಯಕೀಯ ನೆರವು ಪಡೆಯುವ ಮಹತ್ವವನ್ನು ಸಿಪಿಆರ್ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.
ಜ್ಞಾನದೀಪ ಇಂಟರಾರ ಯಕ್ಟ್ ಕ್ಲಬ್ ಅಧ್ಯಕ್ಷ ರೋಶನ್ ಫರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನ ಕಾರ್ಯದರ್ಶಿ ಪ್ರಶಾಂತ್ ಟಿ. ಎಂ. ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ.ಎಂ. ಸ್ವಾಗತಿಸಿದರು. ಪೂರ್ವಾಧ್ಯಕ್ಷ ವಿನಯ್ ಕುಮಾರ್ ಕೆ. ವಂದಿಸಿದರು.
ಫೋಟೋ...
1ಎಸ್ ಯುಎಲ್ -ಬೆಳ್ಳಾರೆ ಜ್ಞಾನದೀಪದಲ್ಲಿಪ್ರಥಮ ಚಿಕಿತ್ಸೆ ಮತ್ತು ಸಿಪಿಆರ್ ಜಾಗೃತಿ ಕಾರ್ಯಕ್ರಮ ನಡೆಯಿತು.