ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇವಲ ಆರ್ಥಿಕ ಸಬಲೀಕರಣಕ್ಕೆ ಸೀಮಿತವಾಗದೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೂ ಆದ್ಯತೆ ನೀಡುತ್ತಿದೆ ಎಂದು ಯೋಜನೆ ಚಿಕ್ಕೋಡಿ ಜಿಲ್ಲಾನಿರ್ದೇಶಕ ಸುರೇಂದ್ರಕುಮಾರ ಹೇಳಿದರು.ಅವರು, ತಾಲೂಕಿನ ಗುಡಸ್ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 3 ಲಕ್ಷ ರೂ. ಡಿಡಿಯನ್ನು ದೇವಸ್ಥಾನ ಕಮಿಟಿ ಸದಸ್ಯರಿಗೆ ವಿತರಿಸಿ ಮಾತನಾಡಿದರು.
‘‘ದೇವಸ್ಥಾನಗಳ ಜೀರ್ಣೋದ್ಧಾರದಿಂದ ಗ್ರಾಮದಲ್ಲಿಭಕ್ತಿ, ಐಕ್ಯತೆ ಮತ್ತು ಸಾಮಾಜಿಕ ಬಾಂಧವ್ಯ ವೃದ್ಧಿಯಾಗುತ್ತದೆ. ಈ ಧನಸಹಾಯವನ್ನು ಸದ್ಬಳಕೆ ಮಾಡಿಕೊಂಡು ದೇವಸ್ಥಾನದ ಕೆಲಸವನ್ನು ಶೀಘ್ರ ಪೂರ್ಣಗೊಳಿಸಬೇಕು,’’ ಎಂದು ಹೇಳಿದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಈರಣ್ಣಗೌಡ ನರಸನ್ನವರ, ಉಪಾಧ್ಯಕ್ಷ ಬಸಪ್ಪ ದೊಡ್ಡದನ್ನವರ, ಯೋಜನಾಧಿಕಾರಿ ಶ್ರೀಕಾಂತ ನಾಯ್ಕ, ವಲಯ ಮೇಲ್ವಿಚಾರಕ ರಮೇಶ ಖಂಡಾಗಳೆ, ಸಿಬ್ಬಂದಿ ಶೈಲಾ ಕಾಂಬ್ಳೆ, ಸ್ವಸಹಾಯ ಸಂಘದ ಸದಸ್ಯರು ಹಾಗೂ ದೇವಸ್ಥಾನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
- 29 ಹುಕ್ಕೇರಿ 01
ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಯೋಜನೆ ವತಿಯಿಂದ ನೀಡಲಾದ ಡಿಡಿಯನ್ನು ದೇಗುಲ ಕಮಿಟಿ ಸದಸ್ಯರಿಗೆ ಹಸ್ತಾಂತರಿಸಲಾಯಿತು.