ಹೊಸಪೇಟೆ(ವಿಜಯನಗರ): ‘‘ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಮೊದಲ ಹಂತದಲ್ಲಿಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಅ.5ರಂದು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ,’’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ .ಮನ್ನಿಕೇರಿ ತಿಳಿಸಿದ್ದಾರೆ.‘‘ತಂಡವು ಬೆಳಗ್ಗೆ 9:15ಕ್ಕೆ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಹಾಗೂ 9:45ಕ್ಕೆ ನೀಲಗುಂದ ಗ್ರಾಮಗಳಿಗೆ ಭೇಟಿ ನೀಡಿ ವಿಬಿಜಿ ರಾಮ್ ಜಿ ಕೆರೆ ಪುನಶ್ಚೇತನ ಕಾಮಗಾರಿ ಪರಿಶೀಲಿಸಲಿದೆ. 11 ಗಂಟೆಗೆ ಮೈದೂರು ಗ್ರಾಮದಲ್ಲಿಮೆಕ್ಕೆಜೋಳ, ರಾಗಿ, ಕಡಲೆಕಾಯಿ, ಸೂರ್ಯಕಾಂತಿ ಹಾಗೂ ಈರುಳ್ಳಿ ಬೆಳೆ ಹಾನಿ ವೀಕ್ಷಿಸಿ, ಕುಡಿಯುವ ನೀರಿನ ಸಮಸ್ಯೆ ಕುರಿತು ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಹಡಗಲಿ ತಾಲೂಕಿನ ಇಟಗಿ ಗ್ರಾಮಕ್ಕೆ ಭೇಟಿ ನೀಡಿ ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆ ಹಾನಿ, ಕೆರೆ ಪುನಶ್ಚೇತನ ಕಾಮಗಾರಿ ಹಾಗೂ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಪರಿಶೀಲಿಸುವರು. ಬಳಿಕ ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿಜಿಲ್ಲಾಮಟ್ಟದ ಬರ ಪರಿಸ್ಥಿತಿ ಕುರಿತು ಕೇಂದ್ರ ತಂಡಕ್ಕೆ ಅಧಿಕಾರಿಗಳಿಂದ ಮಾಹಿತಿ ನೀಡಲಾಗುವುದು,’’ ಎಂದು ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.