ಕಾರ ್ಯಕ್ರಮದಲ್ಲಿಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಸಲಹೆ
ವಿಕ ಸುದ್ದಿಲೋಕ ಸೋಮವಾರಪೇಟೆ ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಿಂದಲೇ ಶಿಸ್ತು , ಸಮಯಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.
ತಾಲೂಕಿನ ಮಾದಾಪುರದ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಮಾದಾಪುರದ ಸರಕಾರಿ ಪ್ರೌಢಶಾಲೆಯಲ್ಲಿಹಮ್ಮಿಕೊಂಡಿರುವ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
‘‘ವಿದ್ಯಾರ್ಥಿಗಳು ಸಾಮಾಜಿಕ ಜಾಗೃತ ಮನೋಭಾವವನ್ನು ಬೆಳೆಸಿಕೊಂಡು ನಮ್ಮ ಸುತ್ತಮುತ್ತಲಿನ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕು. ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು,’’ಎಂದು ಕಿವಿಮಾತು ಹೇಳಿದರು.
ನಿವೃತ್ತ ಡಿಸಿಪಿ ಪೂಣಚ್ಚ ಮಾತನಾಡಿ,‘‘ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿ ದೃಢ ಸಂಕಲ್ಪದಿಂದ ನಿರಂತರ ಅಧ್ಯಯನ ನಡೆಸಿದರೆ ಭವಿಷ್ಯದಲ್ಲಿಯಶಸ್ಸು ಗಳಿಸಲು ಸಾಧ್ಯ,’’ಎಂದರು.
ಡಿ.ಚೆನ್ನಮ್ಮ ವಿದ್ಯಾಸಂಸ್ಥೆಯ ಅಧ್ಯಕ್ಷ ನಿವೃತ್ತ ಕರ್ನಲ್ ಬಿಜಿವಿ ಕುಮಾರ್ ಮಾತನಾಡಿ,‘‘ವಿದ್ಯಾರ್ಥಿಗಳು ಉತ್ತಮ ನಾಯಕತ್ವ ,ಸಂಸ್ಕಾರ ಹಾಗೂ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸನ್ಮಾರ್ಗದಲ್ಲಿನಡೆಯಬೇಕು,’’ಎಂದು ಹೇಳಿದರು.
ಕಾಲೇಜು ಪ್ರಾಂಶುಪಾಲ ಸಿ.ಜಿ.ಮಂದಪ್ಪ ರಾಷ್ಟ್ರೀಯ ಸೇವಾಯೋಜನೆಯ ಧ್ಯೇಯೋದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮಾದಾಪುರ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎ.ಎಂ.ಭರತ್ ಮಾತನಾಡಿದರು. ಶಿಬಿರಾಧಿಕಾರಿ ಮನೋಹರ್ ಪ್ರತಿಜ್ಞಾವಿಧಿ ಭೋದಿಸಿದರು.ಉಪನ್ಯಾಸಕರಾದ ರಾಜು ಸುಂದರಂ, ಪ್ರಮೀಳಾ ಕಾರ್ಯಕ್ರಮ ನಿರ್ವಹಿಸಿದರು.
ವೇದಿಕೆಯಲ್ಲಿಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ಬಿ.ಎ.ಕರುಂಬಯ್ಯ ಹಾಜರಿದ್ದರು.
ಎಂಡಿಕೆ19ಎಸ್ ಪಿಟಿ2:ಸೋಮವಾರಪೇಟೆ ತಾಲೂಕಿನ ಮಾದಾಪುರದ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಮಾದಾಪುರದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದಲ್ಲಿಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿದರು.