24ರಿಂದ ಜಿಲ್ಲಾಗಮಕ ಸಮ್ಮೇಳನ

Contributed by: aravindahebbar1971@gmail.com|Vijaya Karnataka•
district gamaka conference scheduled on april 24 and 25 in belthangady
ವಿಕ ಸುದ್ದಿಲೋಕ ಬೆಳ್ತಂಗಡಿ

ಕರ್ನಾಟಕ ಗಮಕ ಕಲಾ ಪರಿಷÜತ್ತು ದಕ್ಷಿಣ ಕನ್ನಡ ಜಿಲ್ಲೆಹಾಗೂ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ನೇತೃತ್ವದಲ್ಲಿ ಜಿಲ್ಲಾಗಮಕ ಸಮ್ಮೇಳನ ಅ.24 ಮತ್ತು ಅ. 25 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆ ಉಜಿರೆಯಲ್ಲಿನಡೆಯಲಿದೆ ಎಂದು ಜಿಲ್ಲಾಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಪ್ರೊ.ಮಧೂರು ಮೋಹನ ಕಲ್ಲೂರಾಯ ತಿಳಿಸಿದರು.
ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿಅವರು ಮಾತನಾಡಿ, ಹಿರಿಯ ಗಮಕಿ ಜಯರಾಮ ಕುದ್ರೆತ್ತಾಯ ಅವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನವನ್ನು ಬೆಳಗ್ಗೆ 10.30ಕ್ಕೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಸ್ಮರಣ ಸಂಚಿಕೆ ‘ಗಮಕ ಜನಾರ್ದನ’ ಅನಾವರಣಗೊಳಿಸಲಿದ್ದಾರೆ. ಪ್ರೊ. ಮಧೂರು ಮೋಹನ ಕಲ್ಲೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ, ಕಟೀಲು ದೇವಸ್ಥಾನದ ಆನುವಂಶಿಕ ಅರ್ಚಕ ಲಕ್ಷ್ಮೇನಾರಾಯಣ ದಾಸ ಆಸ್ರಣ್ಣ, ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮೂಡುಬಿದಿರೆ ತಾಲೂಕಿನ ಗಮಕ ಕಲಾ ಪರಿಷತ್ತಿನ ಗೌರವಾಧ್ಯಕ್ಷ ಶ್ರೀಪತಿ ಭಟ್ ಮೂಡುಬಿದಿರೆ, ಕಿನ್ನಿಗೋಳಿಯ ಯುಗಪುರುಷÜದ ಭುವನಾಭಿರಾಮ ಉಡುಪ, ಜಿಲ್ಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶಶಿಧರ ಜಿ.ಎಸ್ ., ಎಸ್ ಡಿಎಂ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ಕಿರಣ್ ಉಪಸ್ಥಿತರಿರಲಿದ್ದಾರೆ ಎಂದರು.

ಗಮಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ ಕೆ. ಸುರೇಶ್ ಕುದ್ರೆಂತಾಯ, ಪ್ರೊ. ವೇದವ್ಯಾಸ ರಾಮಕುಂಜ, ಹರಿದಾಸ ತೋನ್ಸೆ ಪುಷ್ಕಳ ಕುಮಾರ್ , ಕೆಯ್ಯೂರು ನಾರಾಯಣ ಭಟ್ , ಗಮಕಿ ಸುವರ್ಣ ಕುಮಾರಿ ಕೆ .ಆರ್ . ಗಮಕಿ ಎ.ಡಿ. ಸುರೇಶ್ ಅವರಿಗೆ ಸನ್ಮಾನ ಕಾರ್ಯಕ್ರಮ ಇರಲಿದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಗಮಕ ಕಲಾ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಭಟ್ ಉಜಿರೆ, ಡಾ. ಶ್ರೀಧರ್ ಭಟ್ , ಸಮ್ಮೇಳನ ಸಮಿತಿಯ ಜತೆ ಕಾರ್ಯದರ್ಶಿ ರಮೇಶ್ ಮಯ್ಯ, ಆರ್ಥಿಕ ಸಮಿತಿಯ ಸಹ ಸಂಚಾಲಕ ಅಶೋಕ ಭಟ್ ಉಜಿರೆ ಉಪಸ್ಥಿತರಿದ್ದರು.