ವಿಕ ಸುದ್ದಿಲೋಕ ರಿಪ್ಪನ್ ಪೇಟೆಸರ್ವರಿಗೂ ಶಿಕ್ಷಣ ದೊರೆತಾಗ ಮಾತ್ರ ಸಮಾಜದಲ್ಲಿಸಮಾನತೆ ಕಾಣಬಹುದು ಎಂಬ ಡಾ. ಬಿ.ಆರ್ .ಅಂಬೇಡ್ಕರ್ ಅವರ ಆಶಯದಲ್ಲಿನಂಬಿಕೆ ಹೊಂದಿರುವ ರಾಜ್ಯ ಸರಕಾರ, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವುದರ ಜತೆಗೆ ಗ್ರಾಮೀಣ ಪ್ರದೇಶಗಳಲ್ಲಿಸುಸಜ್ಜಿತ ವಸತಿ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ ಎಂದು ಶಾಸಕ, ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ಸಹಯೋಗದಲ್ಲಿಕಮದೂರು ಗ್ರಾಮದ ಎಂಟು ಎಕರೆ ಪ್ರದೇಶದಲ್ಲಿ17 ಕೋಟಿ ರೂ. ಅನುದಾನದಲ್ಲಿನಿರ್ಮಿಸಲು ಉದ್ದೇಶಿಸಿರುವ ಡಾ. ಬಿ.ಆರ್ .ಅಂಬೇಡ್ಕರ್ ವಸತಿ ಶಾಲೆಯ ಕಾಮಗಾರಿಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸಾಗರದಲ್ಲಿ30 ಕೋಟಿ ರೂ. ವೆಚ್ಚದಲ್ಲಿಕಾರ್ಮಿಕರ ವಸತಿ ಶಾಲೆ, 20 ಕೋಟಿ ರೂ. ವೆಚ್ಚದಲ್ಲಿಅಲ್ಪಸಂಖ್ಯಾತರ ವಸತಿ ಶಾಲೆ ನಿರ್ಮಾಣ ಕೈಗೊಳ್ಳಲಾಗಿದೆ ಎಂದರು.
ಮಹಿಳೆಯರ ಬೇಡಿಕೆಗೆ ಸ್ಪಂದಿಸಿದ ಶಾಸಕರು, ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಹಬ್ಬದೊಳಗಾಗಿ ಜಮಾ ಮಾಡಲಾಗುವುದು ಎಂದರು. ಇಲ್ಲಿನ ಜನರ ಶಕ್ತಿ ಯೋಜನೆಯ ಸೌಲಭ್ಯಕ್ಕಾಗಿ ಒಂದು ತಿಂಗಳೊಳಗಾಗಿ ಸರಕಾರಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ, ಅಧೀಕ್ಷಕ ಎಂಜಿನಿಯರ್ ನಳಿನಾಕ್ಷಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಿ. ಮಲ್ಲೇಶಪ್ಪ, ತಹಸೀಲ್ದಾರ್ ಭರತ್ ರಾಜ್ , ತಾಲೂಕು ಪಂಚಾಯಿತಿ ಇಒ ನರೇಂದ್ರ ಕುಮಾರ್ , ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ , ಜಿಲ್ಲಾಸಮನ್ವಯಾಧಿಕಾರಿ ಟಿ.ಕೆ. ಚಂದ್ರಪ್ಪ, ಪ್ರಾಂಶುಪಾಲ ಎಚ್ . ಚಂದ್ರಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್ , ಮುಖಂಡರಾದ ಬಂಡಿ ರಾಮಚಂದ್ರ, ಸಾಕಮ್ಮ, ಉಬೇದುಲ್ಲಾಷರೀಫ್ ಹಾಗೂ ಅಮೀರ್ ಹಂಜ ಉಪಸ್ಥಿತರಿದ್ದರು.
17 ಆರ್ ಪಿಟಿ 1:
ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮದೂರಿನಲ್ಲಿಡಾ. ಬಿ.ಆರ್ .ಅಂಬೇಡ್ಕರ್ ವಸತಿ ಶಾಲೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು.