ವಿಕ ಸುದ್ದಿಲೋಕ, ಕುಶಾಲನಗರಸ್ವಾರ್ಥ ರಾಜಕಾರಣಕ್ಕಾಗಿ ಪಕ್ಷ ಬದಲಾಯಿಸಿ, ಬಳಿಕ ಶಾಸಕರನ್ನು ಟೀಕಿಸುವ ಪ್ರವೃತ್ತಿ ಸರಿಯಲ್ಲಎಂದು ಕೆಪಿಸಿಸಿ ಸಂಯೋಜಕ ನಟೇಶ್ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಶಾಲನಗರದಲ್ಲಿಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ‘‘ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಹಾಲಿ ಶಾಸಕರ ಕಾರ್ಯವೈಖರಿಯನ್ನು ಟೀಕಿಸುತ್ತಿರುವುದು ಸಮಂಜಸವಲ್ಲ,’’ ಎಂದರು.
‘‘ಕಾಂಗ್ರೆಸ್ ನಲ್ಲಿದ್ದ ಸಂದರ್ಭದಲ್ಲಿಶಾಸಕರಿಂದ ಹಲವು ಅನುಕೂಲಗಳನ್ನು ಪಡೆದು, ಇದೀಗ ಬಿಜೆಪಿ ಮುಖಂಡರನ್ನು ಮೆಚ್ಚಿಸುವ ಉದ್ದೇಶದಿಂದ ಶಾಸಕರನ್ನು ಅವಹೇಳನ ಮಾಡುವುದು ಸರಿಯಲ್ಲ,’’ ಎಂದು ಆಕ್ಷೇಪ ವ್ಯಕ್ತಪಡಿಸಿದರು.
‘‘ಕಳೆದ ಮೂರು ವರ್ಷಗಳಲ್ಲಿಶಾಸಕ ಡಾ. ಮಂತರ್ ಗೌಡ ಅವರು ಒಂದು ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ,’’ ಎಂದು ಹೇಳಿದರು.
‘‘ಶಾಸಕರ ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿಮುಂಬರುವ ಚುನಾವಣೆಯಲ್ಲಿಕಾಂಗ್ರೆಸ್ ನಿಂದ ಯಾರೇ ಸ್ಪರ್ಧಿಸಿದರೂ ಗೆಲುವು ಸಾಧಿಸಲಿದ್ದಾರೆ,’’ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ‘‘ನಾನೂ ಹೆಬ್ಬಾಲೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಆಕಾಂಕ್ಷಿಯಾಗಿದ್ದೇನೆ,’’ ಎಂದು ತಿಳಿಸಿದರು.
ಸಾಮಾಜಿಕ ಕಾರ್ಯಕರ್ತ ಹಕ್ಕೆ ಮೋಹನ್ ಮಾತನಾಡಿ, ‘‘ಶಾಸಕ ಡಾ.ಮಂತರ್ ಗೌಡ ಅವರ ಕಾರ್ಯವೈಖರಿಯನ್ನು ಮೆಚ್ಚಿ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ,’’ ಎಂದು ತಿಳಿಸಿದರು.
ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಮಾಜಿ ಜನಪ್ರತಿನಿಧಿ ಮಹದೇವ್ ಮಾತನಾಡಿ, ‘‘ಶಾಸಕ ಮಂತರ್ ಗೌಡ ಅವರ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತರಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ,’’ ಎಂದು ತಿಳಿಸಿದರು.
*ಫೋಟೊ ಇದೆ
17ಕೆಯುಎಸ್ 01: ಸುದ್ದಿಗೋಷ್ಠಿಯಲ್ಲಿಮಾತನಾಡಿದ ಕೆಪಿಸಿಸಿ ಸಂಯೋಜಕ ನಟೇಶ್ ಗೌಡ.