ಗ್ರಾಮೀಣ ಭಾಗದಲ್ಲಿಕರಡಿ ಹಾವಳಿ

Contributed byvenkatesh.pavitra@gmail.com|Vijaya Karnataka
bear invasion in rural areas farmers in distress
ಗ್ರಾಮೀಣ ಭಾಗದಲ್ಲಿಕರಡಿ ಹಾವಳಿ

ವಿಕ ಸುದ್ದಿಲೋಕ ಅಜ್ಜಂಪುರ
ಪಟ್ಟಣದ ಸುತ್ತಲಿನ ಗ್ರಾಮಗಳಲ್ಲಿಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲೂ ರಾತ್ರಿ ಎನ್ನದೆ ಕರಡಿಗಳು ಜನವಸತಿ ಪ್ರದೇಶಗಳ ಸುತ್ತಮುತ್ತ ಸಂಚರಿಸುತ್ತಿರುವುದು ರೈತರಲ್ಲಿಆತಂಕ ಮೂಡಿಸಿದೆ.

ಸೊಕ್ಕೆ, ರಂಗಾಪುರ, ತಿಮ್ಮಾಪುರ, ಕಲ್ಲುಶೆಟ್ಟಿಹಳ್ಳಿ ಹಾಗೂ ಕರಡಿಪುರ ಗ್ರಾಮಗಳ ವ್ಯಾಪ್ತಿಯಲ್ಲಿಕರಡಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಕರಡಿ ಸಂಚಾರದಿಂದಾಗಿ ರೈತರು, ಕೂಲಿ ಕಾರ್ಮಿಕರು ಹಾಗೂ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರು ಆತಂಕದಿಂದ ಓಡಾಡುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕರಡಿ ಹಾವಳಿ ಕುರಿತು ಅರಣ್ಯ ಇಲಾಖೆಗೆ ಹಲವು ಬಾರಿ ಮಾಹಿತಿ ಹಾಗೂ ದೂರು ನೀಡಿದ್ದರೂ ಸೂಕ್ತ ಕ್ರಮಕೈಗೊಳ್ಳದೆ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕರಡಿಯನ್ನು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಮೂಲಕ ಆತಂಕ ನಿವಾರಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಕರಡಿ ಹಾವಳಿಯಿಂದ ಯಾವುದೇ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಕರಡಿಯನ್ನು ಸೆರೆ ಹಿಡಿಯಬೇಕೆಂದು ಆಗ್ರಹಿಸಿದರು.