‘ಕೇಂದ್ರದಿಂದ ರೈತರ ಸಾಲಮನ್ನಾ ಮಾಡಿಸಲಿ’ (ಹೆಡ್ )

Contributed byvinayakbhavimani11@gmail.com|Vijaya Karnataka
bjp must ensure central commitment for farmers loan waiver
ಬಿಜೆಪಿ ಮುಖಂಡರಿಗೆ ಸವಾಲು (ಬಾಕ್ಸ್ )

‘ಕೇಂದ್ರದಿಂದ ರೈತರ ಸಾಲಮನ್ನಾ ಮಾಡಿಸಲಿ’ (ಹೆಡ್ )
ವಿಕ ಸುದ್ದಿಲೋಕ ಗದಗ

ಬರಗಾಲದ ವಿಚಾರ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮೊದಲು ಕೇಂದ್ರ ಸರಕಾರದಿಂದ ರೈತರ ಸಾಲಮನ್ನಾ ಮಾಡಿಸುವುದು ಹಾಗೂ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಿ ಎಂದು ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಸವಾಲು ಹಾಕಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿಕೇವಲ ಪ್ರತಿಭಟನೆ ಹಾಗೂ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ರೈತರಿಗೆ ನಿಜವಾದ ನೆರವು ನೀಡಬೇಕಾದರೆ ಕೇಂದ್ರ ಸರಕಾರ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಒತ್ತಾಯಿಸಬೇಕು ಎಂದಿದ್ದಾರೆ.

ರೈತರ ಸಾಲಮನ್ನಾ ವಿಚಾರದಲ್ಲಿಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ರೈತರ ಪರವಾಗಿ ಮಾತನಾಡುವ ಬಿಜೆಪಿ ನಾಯಕರು ಕೇಂದ್ರ ಸರಕಾರದ ಮಟ್ಟದಲ್ಲಿರೈತರಿಗೆ ಅಗತ್ಯ ನೆರವು ಹಾಗೂ ಪರಿಹಾರ ದೊರಕಿಸುವ ನಿಟ್ಟಿನಲ್ಲಿಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರ ವಿವಿಧ ಜನಪರ ಯೋಜನೆಗಳ ಮೂಲಕ ರೈತರು, ಮಹಿಳೆಯರು ಹಾಗೂ ಸಾಮಾನ್ಯ ಜನರಿಗೆ ನೆರವು ನೀಡುತ್ತಿದೆ. ರೈತರ ಕಲ್ಯಾಣ ಮತ್ತು ಮಹಿಳೆಯರ ಸಬಲೀಕರಣಕ್ಕೆ ಸರಕಾರದ ವಿವಿಧ ಯೋಜನೆಗಳು ಸಹಕಾರಿಯಾಗುತ್ತಿವೆ ಎಂದು ತಿಳಿಸಿದ್ದಾರೆ.