ಆಳ್ವಾಸ್ ಪಿಯು ಶಿಕ್ಷಣದ ದತ್ತು ಯೋಜನೆಯಲ್ಲಿಶಿಕ್ಷಣ ಪಡೆದ ಬಸ್ ಚಾಲಕನ ಪುತ್ರಿ ಈಗ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನೂತನವಾಗಿ ಆರಂಭವಾಗಿರುವ ಆಳ್ವಾಸ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಮೊದಲ ಎಂಬಿಬಿಎಸ್ ಪ್ರವೇಶಕ್ಕೆ ಸರಕಾರಿ ಕೋಟಾದಡಿ ಪ್ರವೇಶ ಪಡೆದಿದ್ದಾರೆ.ಕಾರ್ಕಳ ತಾಲೂಕಿನ ಕುಂಟಲ್ಪಾಡಿ ನಿವಾಸಿ ಸ್ನೇಹಾ, ಸೀಮಿತ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದು ಶೈಕ್ಷಣಿಕ ಪರಿಶ್ರಮ, ಅವಕಾಶ ಹಾಗೂ ಸೂಕ್ತ ಮಾರ್ಗದರ್ಶನದ ಮೂಲಕ ವೈದ್ಯಕೀಯ ಶಿಕ್ಷಣದ ಕನಸನ್ನು ನನಸಾಗಿಸಿಕೊಂಡಿದ್ದಾರೆ.
ಎಸ್ ಎಸ್ ಎಲ್ ಸಿಯನ್ನು ಜೇಸಿಸ್ ಹೈಸ್ಕೂಲ್ ನಲ್ಲಿ590 ಅಂಕಗಳೊಂದಿಗೆ ಪೂರ್ಣಗೊಳಿಸಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಸೇರಿ ದತ್ತು ಯೋಜನೆಯಡಿ ಶಿಕ್ಷಣ ಮುಂದುವರಿಸಿದ್ದರು. ನೀಟ್ ನಲ್ಲಿ720ಕ್ಕೆ 506 ಅಂಕಗಳನ್ನು ಗಳಿಸಿ, ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿಸರಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದುಕೊಂಡಿದ್ದಾರೆ. ಮುಂದೆ ಹೃದ್ರೋಗ ತಜ್ಞೆಯಾಗುವ ಗುರಿ ಹೊಂದಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವುದು ದತ್ತು ಯೋಜನೆಯ ಉದ್ದೇಶವಾಗಿದೆ ಎಂದು ಡಾ.ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.