ಪೂರ್ವಭಾವಿ ಸಭೆಯಲ್ಲಿಜಿಲ್ಲಾಧಿಕಾರಿ ಎಂ.ಆರ್ .ರವಿಕುಮಾರ್ ಸೂಚನೆ
ವಿಕ ಸುದ್ದಿಲೋಕ ಬಂಗಾರಪೇಟೆಸರಕಾರದ ನಾನಾ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಪ್ರಜಾ ಸೇವಾ ಆಂದೋಲನ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್ . ರವಿಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿಶಾಸಕ ಎಸ್ .ಎನ್ ನಾರಾಯಣಸ್ವಾಮಿಯವರ ಅಧ್ಯಕ್ಷತೆಯಲ್ಲಿನಡೆದ ಪ್ರಜಾ ಸೇವಾ ಆಂದೋಲನದ ಪೂರ್ವಭಾವಿ ಸಭೆಯಲ್ಲಿಮಾತನಾಡಿದ ಅವರು, ಆ.5ರಂದು ಬೆಳಿಗ್ಗೆ 9 ಗಂಟೆಗೆ ನಗರಸಭೆ ಆವರಣದಲ್ಲಿಕಾರ್ಯಕ್ರಮ ನಡೆಯಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದ?Üು್ಟ ತ್ವರಿತವಾಗಿ ಪರಿಹಾರ ಒದಗಿಸಬೇಕು ಎಂದರು.
ಆಂದೋಲನದಲ್ಲಿಪ್ರತಿಯೊಂದು ಇಲಾಖೆಯಿಂದಲೂ ಪ್ರತ್ಯೇಕ ಕೌಂಟರ್ ತೆರೆಯಬೇಕು. ಕಂದಾಯ, ಸಮಾಜ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳು ಹಾಗೂ ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ, ಮಾರ್ಗದರ್ಶನ ಮತ್ತು ಅಗತ್ಯ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಸರಕಾರದಿಂದ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ತಾಲೂಕು ಆಡಳಿತದ ವತಿಯಿಂದ ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಗುವುದು. ಸಾರ್ವಜನಿಕರು ತಮ್ಮ ಸಮಸ್ಯೆ, ಬೇಡಿಕೆ ಅಥವಾ ಯೋಜನೆಗೆ ಸಂಬಂಧಿಸಿದ ಅರ್ಜಿಯನ್ನು ನಿಗದಿತ ನಮೂನೆಯಲ್ಲಿಸಲ್ಲಿಸಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಸ್ಥಳದಲ್ಲೇ ಸಾಧ್ಯವಾದಷ್ಟು ಪರಿಹಾರ ಕಲ್ಪಿಸಲಿದ್ದಾರೆ ಎಂದರು.
ಕೆಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಸಾಧ್ಯವಾಗದಿದ್ದರೆ, ಅವುಗಳನ್ನು ಸಂಬಂಧಿಸಿದ ಇಲಾಖೆಗೆ ರವಾನಿಸಿ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಅರ್ಜಿಯನ್ನು ಅಧಿಕಾರಿಗಳು ನಿರ್ಲಕ್ಷಿಸದೆ, ಅದರ ಸ್ಥಿತಿಗತಿ ಕುರಿತು ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶಗಳ ಬಡವರು ಹಾಗೂ ಸರಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿರುವ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸುವುದು ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಹೀಗಾಗಿ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳ ಕುರಿತು ಜನರಲ್ಲಿಹೆಚ್ಚಿನ ಅರಿವು ಮೂಡಿಸಬೇಕು ಎಂದು ಹೇಳಿದರು.
ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಬೇಕು. ಅಧಿಕಾರಿಗಳೂ ಸಾರ್ವಜನಿಕರಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅರ್ಜಿಗಳ ವಿಲೇವಾರಿಯಲ್ಲಿಅನಗತ್ಯ ವಿಳಂಬ ಮಾಡುವುದು, ಕಾರಣವಿಲ್ಲದೆ ನೆಪ ಹೇಳುವುದು ಅಥವಾ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸುವುದು ಕಂಡುಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದರು.
ಸೆ.5ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ನಿಗದಿತ ಸಮಯದಲ್ಲಿಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಬಳಿಕ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ, ಅರ್ಹತೆ ಹಾಗೂ ನಿಯಮಾನುಸಾರ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಅಥವಾ ಮುಂದಿನ ಕ್ರಮದ ಕುರಿತು ಮಾಹಿತಿ ನೀಡಲಿದ್ದಾರೆ. ಸರಕಾರದ ವಿವಿಧ ಇಲಾಖೆಗಳ ಯೋಜನೆಗಳು, ಸೌಲಭ್ಯಗಳು ಹಾಗೂ ಅರ್ಹತಾ ಮಾನದಂಡಗಳ ಕುರಿತು ಸಾರ್ವಜನಿಕರಲ್ಲಿಅರಿವು ಮೂಡಿಸಲು ಕಾರ್ಯಕ್ರಮದ ಸ್ಥಳದಲ್ಲಿಯೋಜನೆಗಳ ಮಾಹಿತಿಯುಳ್ಳ ಫ್ಲೆಕ್ಸ್ ಅಳವಡಿಸಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶದ ಹೆಚ್ಚಿನ ಜನರು ಆಂದೋಲನದ ಪ್ರಯೋಜನ ಪಡೆದುಕೊಳ್ಳುವಂತೆ ಅಧಿಕಾರಿಗಳು ಅಗತ್ಯ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಶಾಸಕ ಎಸ್ .ಎನ್ ನಾರಾಯಣಸ್ವಾಮಿ ಮಾತನಾಡಿ, ಜನಸಾಮಾನ್ಯರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿಒಂದೇ ಸ್ಥಳದಲ್ಲಿವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಸಲುವಾಗಿ ರಾಜ್ಯ ಸರಕಾರ ಪ್ರಜಾ ಸೇವಾ ಆಂದೋಲನ ಜಾರಿಗೆ ತಂದಿದೆ. ಅಧಿಕಾರಿಗಳು ಬಡವರ ಕಲ್ಯಾಣಕ್ಕಾಗಿ ಅನುಷ್ಟಾನ ಮಾಡಿರುವ ಎಲ್ಲಾಯೋಜನೆಗಳನ್ನು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸ ಅಧಿಕಾರಿಗಳು ಮಾಡಬೇಕು. ಕೆಲವು ಸಂದರ್ಭಗಳಲ್ಲಿವಿವಿಧ ಕಾರಣಗಳಿಂದ ಯೋಜನೆ ತಲುಪುವುದು ಕಷ್ಟಕರವಾಗಬಹುದು ಅದನ್ನು ಹೋಗಲಾಡಿಸಲು ಪ್ರಜಾ ಸೇವಾ ಆಂದೋಲನ ಸಹಕಾರಿಯಾಗಿದೆ ಎಂದರು.
ಈ ವೇಳೆ ತಹಸೀಲ್ದಾರ್ ಕೆ.ಎನ್ ಸುಜಾತ, ತಾಪಂ ಇಒ ರವಿಕುಮಾರ್ , ನಗರಸಭೆ ಆಯುಕ್ತ ಜಗಾರೆಡ್ಡಿ, ಸರ್ಕಲ್ ಇನ್ಸ್ ಪೆಕ್ಟರ್ ರವಿಕುಮಾರ್ , ಅಧಿಕಾರಿಗಳಾದ ಯುವರಾಜ್ , ಆನಂದ್ , ಶ್ರೀಲಕ್ಷಿತ್ರ್ಮ, ಸುದರ್ಶನ್ , ಅನಿತಾ ಮುಂತಾದ ಅಧಿಕಾರಿಗಳು ಹಾಜರಿದ್ದರು.
1 ಬಂಗಾರಪೇಟೆ ನಗರದ ತಾಲ್ಲೂಕು ಕಚೇರಿಯಲ್ಲಿಶಾಸಕ ಎಸ್ .ಎನ್ ನಾರಾಯಣಸ್ವಾಮಿಯವರ ಅಧ್ಯಕ್ಷತೆಯಲ್ಲಿಪ್ರಜಾ ಸೇವಾ ಆಂದೋಲನ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.