ಕುಂದಾಪುರ : ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿವಿಶ್ವ ಸಂಸ್ಕೃತ ದಿನ ಹಾಗೂ ರಕ್ಷಾಬಂಧನ ಆಚರಿಸಲಾಯಿತು.
ಮುಖ್ಯ ಅತಿಥಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ವೆಂಕಟೇಶ್ ಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಂದು ಭಾರತೀಯ ಹಬ್ಬಗಳ ಹಿಂದೆ ಆಳವಾದ ಸಂಸ್ಕೃತ ಹಾಗೂ ವೈಜ್ಞಾನಿಕ ಹಿನ್ನೆಲೆ ಇದೆ. ಹಬ್ಬಗಳ ಮಹತ್ವ ಮತ್ತು ಹಿನ್ನೆಲೆಯನ್ನು ಅರಿತು ಆಚರಿಸಿದಾಗ ಮಾತ್ರ ಅವುಗಳ ನೈಜ ಅರ್ಥ ಲಭಿಸುತ್ತದೆ ಎಂದರು.ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಅಗತ್ಯ ಮಾನವನ ಜೀವನದಲ್ಲಿಎದುರಾಗುವ ಎಲ್ಲರೀತಿಯ ಸಮಸ್ಯೆಗಳಿಗೆ ಭಗವದ್ಗೀತೆ ಓದುವುದರಿಂದ ಸೂಕ್ತವಾದ ಪರಿಹಾರ ಸಿಗುತ್ತದೆ ಎಂದರು. ಎಂ.ಎಂ. ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ಮಹೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ನಾಗರಾಜ್ ಶೆಟ್ಟಿ, ಹೈಸ್ಕೂಲು ವಿಭಾಗದ ಮುಖ್ಯ ಶಿಕ್ಷಕಿ ಸರೋಜಿನಿ ಪಿ.ಆಚಾರ್ಯ, ಸಿಬಿಎಸ್ಸಿ ವಿಭಾಗದ ಸಂಯೋಜಕಿ ವಿಶಾಲ ಶೆಟ್ಟಿ, ಸಂಸ್ಕೃತ ಉಪನ್ಯಾಸಕ ಶುಭೋದ್ ಉಪಸ್ಥಿತರಿದ್ದರು. ಶಿಕ್ಷಕ ಸಂದೀಪ್ ಕಾರ್ಯಕ್ರಮ ನಿರ್ವಹಿಸಿದರು.