Jds Workers Attempt To Besiege Kpcc Office Demand Resignation Of Priyank Kharge
ಜೆಡಿಎಸ್ ನಿಂದ ಕೆಪಿಸಿಸಿ ಕಚೇರಿ ಮುತ್ತಿಗೆ ಯತ್ನ
Contributed by: KENCHE GOWDA|Vijaya Karnataka•
ವಿಕ ಸುದ್ದಿಲೋಕ ಬೆಂಗಳೂರು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನಡೆದ ಎಇಇ ಗ್ರೇಡ್ - 1 ಹುದ್ದೆಗಳ ಆಯ್ಕೆ ಮತ್ತು ನೇಮಕದ ಅಕ್ರಮದಲ್ಲಿಹಿಂದೆ ಆ ಇಲಾಖೆ ಸಚಿವ ರಾಗಿದ್ದ ಪ್ರಿಯಾಂಕ್ ಖರ್ಗೆ ಯವರು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಮಂಗಳವಾರ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್ .ಎಂ.ರಮೇಶ್ ಗೌಡ ನೇತೃತ್ವದಲ್ಲಿಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸೇರಿದಂತೆ ನೂರಾರು ಕಾರ ್ಯಕರ್ತ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.