250 ಹಾಸಿಗೆಗಳ ಆಸ್ಪತ್ರೆ ಮೇಲ್ದರ್ಜೆಗೆ ಪ್ರಸ್ತಾವನೆ

Contributed bykugweprakash@gmail.com|Vijaya Karnataka
proposal to upgrade 250 bed hospital a new vision for health
250 ಹಾಸಿಗೆಗಳ ಆಸ್ಪತ್ರೆ ಮೇಲ್ದರ್ಜೆಗೆ ಪ್ರಸ್ತಾವನೆ

ವಿಕ ಸುದ್ದಿಲೋಕ ಸಾಗರ
ನಗರದ ಉಪವಿಭಾಗೀಯ ಆಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯ ಹಣಕಾಸು ಇಲಾಖೆ ಅನುಮೋದನೆಗೆ ಹೋಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ನಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ 100 ಹಾಸಿಗೆಗಳ ಸಾಮರ್ಥ್ಯವಿರುವ ಆಸ್ಪತ್ರೆಯಲ್ಲಿ117 ಹಾಸಿಗೆಗಳನ್ನು ಅಳವಡಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಾಗರ ಮಾತ್ರವಲ್ಲದೆ ಹೊರ ಜಿಲ್ಲೆಹಾಗೂ ತಾಲೂಕುಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿರೋಗಿಗಳು ಬರುತ್ತಿದ್ದಾರೆ. ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಆಸ್ಪತ್ರೆಯ ಮೂಲಸೌಕರ್ಯವನ್ನು ವಿಸ್ತರಿಸುವ ಅಗತ್ಯವಿದೆ. ಆಸ್ಪತ್ರೆಯಲ್ಲಿ24 ಗಂಟೆಯೂ ನೀರು ಮತ್ತು ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿರಬೇಕು. ವಿದ್ಯುತ್ ವ್ಯತ್ಯಯವಾದ ಸಂದರ್ಭ ಜನರೇಟರ್ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೊಸ ಬೋರ್ ವೆಲ್ ಕೊರೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಡೇ ಕೇರ್ ಆರಂಭಿಸಲು ಸಲಹೆ:

ಸಮಿತಿ ಸದಸ್ಯ ಜಯರಾಂ ಮಾತನಾಡಿ, ಆಸ್ಪತ್ರೆಯಲ್ಲಿರೋಗಿಗಳ ಸಂಖ್ಯೆ ಹೆಚ್ಚಿರುವುದರಿಂದ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗಿದೆ. ಹಾಸಿಗೆಗಳ ಕೊರತೆಯಿಂದ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುವ ರೋಗಿಗಳನ್ನು ಕೂಡ ಶಿವಮೊಗ್ಗಕ್ಕೆ ಕಳುಹಿಸುವ ಪರಿಸ್ಥಿತಿ ಇದೆ. ಹೀಗಾಗಿ ಉಪವಿಭಾಗೀಯ ಆಸ್ಪತ್ರೆಯಲ್ಲಿಯೇ ಡೇ ಕೇರ್ ವ್ಯವಸ್ಥೆ ಆರಂಭಿಸಿದರೆ, ಕೆಲವು ಗಂಟೆಗಳ ಕಾಲ ವೈದ್ಯಕೀಯ ಮೇಲ್ವಿಚಾರಣೆಯಲ್ಲಿಚಿಕಿತ್ಸೆ ನೀಡಿ ಮನೆಗೆ ಕಳುಹಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಸಭೆಯಲ್ಲಿಎಸಿ ವೀರೇಶಕುಮಾರ್ , ಡಿಎಚ್ ಒ ಡಾ. ನಟರಾಜ್ , ತಹಸೀಲ್ದಾರ್ ಡಾ.ಆರ್ .ಪ್ರತಿಭಾ, ಪೌರಾಯುಕ್ತ ಎಚ್ .ಕೆ. ನಾಗಪ್ಪ, ವೈದ್ಯರಾದ ಡಾ. ಸುರೇಶ್ , ಡಾ. ವಿಕ್ರಮ್ , ಡಾ. ಶಾಂತಲಾ, ಡಾ. ಬಿ.ಜಿ. ಸಂಗಮ್ ಸೇರಿದಂತೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಚಿತ್ರಶೀರ್ಷಿಕೆ

02ಎಸ್ ಜಿಆರ್ 1

ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿಬುಧವಾರ ಆರೋಗ್ಯ ರಕ್ಷಾ ಸಮಿತಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿನಡೆಯಿತು.