*ಚಿತ್ರ:2ಜಿಎಲ್ ಬಿ50: ಮಾದಿಗ ಸಂಘಟನೆಗಳ ಒಕ್ಕೂಟದ ಮುಖಂಡರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
* ರಾಜ್ಯದ ದಲಿತ ಸಮುದಾಯದ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆಗೆ ಖಂಡನೀಯಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯ
ವಿಕ ಸುದ್ದಿಲೋಕ ಕಲಬುರಗಿ
ರಾಜ್ಯದ ದಲಿತ ಸಮುದಾಯದ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು, ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ಮುಖಂಡರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ದಲಿತರ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ ಹೆಚ್ಚಾಗಿದೆ. ರಾಯಚೂರು ಜಿಲ್ಲೆಯಲ್ಲಿಆಗಸ್ಟ್ ತಿಂಗಳೊಂದರಲ್ಲಿಯೇ 2 ಕೊಲೆಗಳು ನಡೆದಿವೆ. ಯುವತಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. ಕೂಡಲೇ ಆರೋಪಿಗಳಿಗೆ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು, ನೊಂದ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.