ಯುವ ನಿಧಿ ಅರಿವು ಕಾರ್ಯಕ್ರಮ

Contributed byharisha.lakshmipathy@timesgroup.com|Vijaya Karnataka
awareness program of youth fund scheme until students get jobs
ಯುವ ನಿಧಿ ಅರಿವು ಕಾರ್ಯಕ್ರಮ

ವಿಕ ಸುದ್ದಿಲೋಕ ಮೈಸೂರು
ಪದವಿ ಪಡೆದ ವಿದ್ಯಾರ್ಥಿಗಳು ಉದ್ಯೋಗ ಲಭಿಸುವವರೆಗೂ ಯುವ ನಿಧಿ ಯೋಜನೆಯ ಅನುಕೂಲ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್ .ಅರುಣ್ ಕುಮಾರ್ ಹೇಳಿದರು.

ತಿ.ನರಸೀಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಯೋಜಿಸಿದ್ದ ಯುವ ನಿಧಿ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿಮಾತನಾಡಿದರು.

‘‘ಶಿಕ್ಷಣ ಪಡೆದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾಂಗ್ರೆಸ್ ಸರಕಾರ ಯುವ ನಿಧಿ ಯೋಜನೆಯನ್ನು ಆರಂಭಿಸಿದ್ದು, ಪದವಿ ಪಡೆದ ವಿದ್ಯಾರ್ಥಿಗಳು ಉದ್ಯೋಗ ಲಭಿಸುವವರೆಗೂ ಸರಕಾರ ನೀಡುವ ಈ ಯುವ ನಿಧಿ ಸೌಲಭ್ಯವನ್ನು ಪಡೆದುಕೊಳ್ಳಬೇಕು,’’ ಎಂದು ಮನವಿ ಮಾಡಿದರು.

ಯುವ ನಿಧಿ ಯೋಜನೆಯ ಉದ್ದೇಶ, ಅರ್ಹತೆ ಹಾಗೂ ಯುವಜನರಿಗೆ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಎಚ್ .ವಿ. ಉದಯಕುಮಾರ್ , ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ , ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಹುಣಸೂರು ಬಸವಣ್ಣ, ತಿ.ನರಸೀಪುರ ತಾಲೂಕು ಕಾರ್ಯನಿರ್ವಹಣಾಧಿಕಾರಿ ರಂಗಸ್ವಾಮಿ, ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಟೋ ಇದೆ

ತಿ. ನರಸೀಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಯೋಜಿಸಿದ್ದ ಯುವ ನಿಧಿ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್ .ಅರುಣ್ ಕುಮಾರ್ ಮಾತನಾಡಿದರು.