ಸ್ತುಬದ್ಧ ಜೀವನ ಸಾಧನೆಯ ದಾರಿದೀಪ

Contributed bynasirmnkodagu@gmail.com|Vijaya Karnataka
disciplined living as a beacon of achievement commanding officers address at sports day celebration
ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಕಿವಿಮಾತು | ರಾಷ್ಟ್ರೀಯ ಕ್ರೀಡಾ ದಿನಾಚರಣೆ

ವಿಕ ಸುದ್ದಿಲೋಕ ಮಡಿಕೇರಿ
ಶಿಸ್ತುಬದ್ಧ ಜೀವನವು ಸಾಧನೆಯ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು 19 ಸಿ ಕರ್ನಾಟಕ ಬೆಟಾಲಿಯನ್ ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿದರು.

‘‘ಕ್ರೀಡೆಯು ವಿದ್ಯಾರ್ಥಿಗಳಲ್ಲಿಶಿಸ್ತು, ತಂಡದ ಮನೋಭಾವ, ನಾಯಕತ್ವ ಗುಣ ಹಾಗೂ ಸಹಕಾರದ ಮನೋಭಾವವನ್ನು ಬೆಳೆಸುವುದರ ಜೊತೆಗೆ ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳಲ್ಲಿಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು,’’ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ್ , ‘‘ಭಾರತವನ್ನು ಶಕ್ತಿಶಾಲಿ ಹಾಗೂ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವಲ್ಲಿಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. ಆರೋಗ್ಯವಂತ ಯುವಜನತೆಯೇ ದೇಶದ ಭವಿಷ್ಯವನ್ನು ಸಮರ್ಥವಾಗಿ ರೂಪಿಸಬಲ್ಲದು. ಕ್ರೀಡೆಯು ದೈಹಿಕ ಕ್ಷಮತೆಯ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ, ಸಮಯಪಾಲನೆ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ದೈನಂದಿನ ಜೀವನದಲ್ಲಿಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು,’’ ಎಂದು ಹೇಳಿದರು.

ಲೆಫ್ಟಿನೆಂಟ್ ಕರ್ನಲ್ ಶ್ರೀನಿವಾಸನ್ , ದೈಹಿಕ ಶಿಕ್ಷಣ ವಿಭಾಗದ ರಮೇಶ್ ಪಿ.ಸಿ., ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ತಿಪ್ಪೇಸ್ವಾಮಿ.ಇ. ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಗಣ್ಯರು ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಾನಾ ಕ್ರೀಡಾ ಸ್ಪರ್ಧೆಗಳಲ್ಲಿವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆ, ಕೌಶಲ್ಯ ಹಾಗೂ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದರು.

ಪ್ರಥಮ ಬಿ.ಎ. ವಿದ್ಯಾರ್ಥಿನಿ ಪೂವಮ್ಮ ಅವರು ಮೇಜರ್ ಧ್ಯಾನ್ ಚಂದ್ ಅವರ ಜೀವನ, ಕ್ರೀಡಾ ಸಾಧನೆಗಳು ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳ ಕುರಿತು ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.

ಫೋಟೊ: ಎಂಡಿಕೆ03ಎನ್ - ಎಫ್ ಎಂಸಿ ಸೋರ್ಟ್ಸ್

ಕ್ಯಾಪ್ಷನ್ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ19 ಸಿ ಕರ್ನಾಟಕ ಬೆಟಾಲಿಯನ್ ನ ಕಮಾಂಡಿಂಗ್ ಆಫೀಸರ್ ಕರ್ನಲ್ ಸಂಜೀವ್ ಕುಮಾರ್ ಮಾತನಾಡಿದರು.