ಶಿವಮೊಗ್ಗ: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ವಿತರಣಾ ಕೇಂದ್ರದಲ್ಲಿದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿಸೆ.6ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಇದರ ಪರಿಣಾಮ ಸೆ. 6, 7ರಂದು ನಗರಾದ್ಯಂತ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿವ್ಯತ್ಯಯ ಉಂಟಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಕಟಣೆ ತಿಳಿಸಿದೆ.